ಕೋಲಾರ: ‘ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಮತ್ತು ಶಿಸ್ತು ಬೆಳೆಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಪ್ರೌಢ ಶಾಲೆಗಳಲ್ಲಿ ಜೂನಿಯರ್ ರೆಡ್ಕ್ರಾಸ್ ಘಟಕ ಆರಂಭಿಸಲಾಗುವುದು’ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ರೇವಣ ಸಿದ್ದಪ್ಪ ಹೇಳಿದರು.

ಇಲ್ಲಿ ಸೋಮವಾರ ರೆಡ್ಕ್ರಾಸ್ ಉಪ ಸಮಿತಿ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತನಾಡಿ, ‘ದೇಶ ಮತ್ತು ಜಗತ್ತಿನೆಲ್ಲೆಡೆ ಭಾರತೀಯ ರೆಡ್ಕ್ರಾಸ್ ಸಂಸ್ಥೆಯು ತನ್ನ ಇತಿಮಿತಿಯಲ್ಲಿ ಸೇವಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ರೆಡ್ಕ್ರಾಸ್ ಸಂಸ್ಥೆಯು ಪ್ರಾಕೃತಿಕ ವಿಕೋಪ, ಅಗ್ನಿ ಅನಾಹುತ, ಕೋವಿಡ್ನಂತಹ ಸಂಕಷ್ಟದ ಸಂದರ್ಭಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಕೆಲಸ ಮಾಡುತ್ತದೆ. ಇಂತಹ ಸಂಸ್ಥೆಯ ಜೂನಿಯರ್ ಘಟಕಗಳನ್ನು ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ರಾಷ್ಟ್ರೀಯತೆ, ಶಾಂತಿ ಮತ್ತು ಕೋಮು ಸೌಹಾರ್ದ ಕಾಪಾಡಬೇಕು’ ಎಂದು ತಿಳಿಸಿದರು.

‘ಜೂನಿಯರ್ ರೆಡ್ಕ್ರಾಸ್ ಘಟಕಗಳು ಮಕ್ಕಳಲ್ಲಿ ಉದಾತ್ತ ಮೌಲ್ಯಗಳನ್ನು ಬಿತ್ತಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿರುವ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಶಾಲೆಗಳಲ್ಲಿ ಆರಂಭಿಸಿ, ಸದೃಢ ನಾಯಕತ್ವ ಗುಣ ಬೆಳೆಸಬೇಕು’ ಎಂದು ಕಿವಿಮಾತು ಹೇಳಿದರು.

‘ಪ್ರೌಢ ಶಾಲೆಗಳಲ್ಲಿ ಜೂನಿಯರ್ ರೆಡ್ಕ್ರಾಸ್ ಘಟಕದ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರತಿ ಶಾಲೆಯಲ್ಲಿ ಸಂಪನ್ಮೂಲ ಶಿಕ್ಷಕರಿಗೆ ತರಬೇತಿ ನೀಡಲಾಗುವುದು’ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎನ್.ಗೋಪಾಲಕೃಷ್ಣಗೌಡ ತಿಳಿಸಿದರು.

ರೆಡ್ಕ್ರಾಸ್ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಎಸ್.ಸಿ.ವೆಂಕಟಕೃಷ್ಣಪ್ಪ, ಉಪ ಸಭಾಪತಿ ಆರ್.ಶ್ರೀನಿವಾಸನ್, ಕಾರ್ಯದರ್ಶಿ ನಂದೀಶ್ಕುಮಾರ್, ಕಾರ್ಯಕ್ರಮ ಅಧಿಕಾರಿ ಶರಣಪ್ಪ ಗಬ್ಬೂರ್, ರಾಜ್ಯ ಸದಸ್ಯ ಜಿ.ಶ್ರೀನಿವಾಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.