ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು, ‘ತನಿಖಾ ಸಂಸ್ಥೆಗಳು ಕಾನೂನು ಪ್ರಕಾರ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿವೆ. ಆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ತಪ್ಪು ಇನ್ನೂ ಸಾಬೀತಾಗಿಲ್ಲ. ಶಿವಕುಮಾರ್ ಅಪರಾಧಿ ಎಂದು ಹೇಳಿಲ್ಲ. ನ್ಯಾಯಾಧೀಶರು ತೀರ್ಪು ನೀಡುತ್ತಾರೆ. ವೈಯಕ್ತಿಕವಾಗಿ ನಾನು ಏನೂ ಹೇಳುವುದಿಲ್ಲ’ ಎಂದರು.