ಸೋಮವಾರ, ನವೆಂಬರ್ 28, 2022
20 °C

ಬೇತಮಂಗಲ: ಗಡಿ ಭಾಗದಲ್ಲಿ ಕನ್ನಡ ಡಿಂಡಿಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇತಮಂಗಲ: ನಾಡಿನ ಗಡಿ ಭಾಗವಾದ ಬೇತಮಂಗಲದಲ್ಲಿ ಕನ್ನಡಾಭಿಮಾನಿಗಳು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಿದರು.

ಬೇತಮಂಗಲ ಗ್ರಾಮದ ಬಸ್ ನಿಲ್ದಾಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಆಟೊ ಚಾಲಕರ ಸಂಘ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಬೇತಮಂಗಲ ಪೊಲೀಸ್ ಠಾಣೆಯ ಪಿಎಸ್‌ಐ ಜಗದೀಶ್ ರೆಡ್ಡಿ ಧ್ವಜಾರೋಹಣ ನೆರವೇರಿಸಿದರು. ಪಲ್ಲಕ್ಕಿ ಮೂಲಕ ಭುವನೇಶ್ವರಿ ದೇವಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು