ಮಂಗಳವಾರ, ಜನವರಿ 26, 2021
24 °C

ಯತ್ನಾಳ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಬಳಿಕ ಯತ್ನಾಳ್‌ ಅವರ ಭೂತದಹನ ಮಾಡಿದರು.

ಕರವೇ ತಾಲ್ಲೂಕು ಅಧ್ಯಕ್ಷ ಶಿವಾರ ನಾರಾಯಣಸ್ವಾಮಿ ಮಾತನಾಡಿ, ಯತ್ನಾಳ್ ಅವರು ಕರ್ನಾಟಕ ಬಂದ್ ಮಾಡುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಕೆಣಕಿದ್ದಾರೆ ಎಂದು ದೂರಿದರು.

50 ವರ್ಷಗಳಿಂದ ನಾಡು-ನುಡಿ, ಗಡಿ, ಭಾಷೆಗೆ ಕುತ್ತು ಬಂದಾಗ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಿವೆ. ಆದರೆ, ರೋಲ್‌ಕಾಲ್‌ ಹೋರಾಟಗಾರರು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕನ್ನಡ ವಿರೋಧಿ ಶಾಸಕರಿಗೆ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ ನೀಡಬಾರದು ಎಂದು ಆಗ್ರಹಿಸಿದರು.

ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕನ್ನಡ ಪರ ಹೋರಾಟಗಾರರ ಕ್ಷಮೆ ಕೇಳಬೇಕು. ಇಲ್ಲವಾದರೆ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ಕೋಪ್ಪ ಚಂದ್ರು, ಪಾಪರೆಡ್ಡಿ, ಎ.ಎನ್. ದಯಾನಂದ್, ಮಣಿಗಂಡನ್, ದಾಕ್ಷಾಯಿಣಿ, ಐರನ್ ಅಮರ್, ನಾರಾಯಣಸ್ವಾಮಿ, ಆನಂದ್, ಗೋಪಿ, ಮಂಜುನಾಥ್, ನರೇಶ್, ಚಲಪತಿ, ಮಿಥುನ್, ಸುರೇಶ್ ರೆಡ್ಡಿ, ರಮೇಶ್, ಷಣ್ಮುಗಂ, ಸುಂದರೇಶ್ ಗೌಡ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.