ಕೋಲಾರ: ‘ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆಗೆ ನಾನು ಮಾನಸಿಕವಾಗಿ ಸಿದ್ಧವಾಗಿದ್ದೇನೆ. ಆದರೆ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.
ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಏ.4ರಂದು ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ವರುಣಾದಲ್ಲೂ ಸ್ಪರ್ಧೆ ಮಾಡುತ್ತೇನೆ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ನನ್ನ ತವರೂರಾಗಿರುವ ಕಾರಣ ಅಲ್ಲಿ ಕಣಕ್ಕಿಳಿಯುತ್ತಿದ್ದೇನೆ. ಅಲ್ಲಿಯೇ ನನ್ನ ರಾಜಕೀಯ ಪ್ರಾರಂಭವಾಗಿತ್ತು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.