ಕೋಲಾರ: ‘ರಾಜ್ಯ ಕಾಂಗ್ರೆಸ್ ಸರ್ಕಾರ ಮುಡಾ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಾಗೂ ದಲಿತರ ಅನುದಾನ ದುರುಪಯೋಗ ಸೇರಿದಂತೆ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಬಿಜೆಪಿ ಪಾದಯಾತ್ರೆ ಮುಗಿಯುವುಷ್ಟರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವುದಿಲ್ಲ. ಸರ್ಕಾರವೂ ಪತನಗೊಳ್ಳಲಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.