ಮುಳಬಾಗಿಲು: ಗ್ರಾಮೀಣ ಭಾಗದ ಕನ್ನಡ ಖಾಸಗಿ ಶಾಲಾ ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ, ನೌಕರರ ಒಕ್ಕೂಟ, ಭಾರತೀಯ ಕಿಸಾನ್ ಸಂಘ ಮತ್ತು ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಈ ವೇಳೆ ಕುವೆಂಪು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಬಿ.ಎನ್.ಗಣೇಶನ್ ಮಾತನಾಡಿ, ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ 1995 ರಿಂದ 2012ರ ತನಕ ಆರಂಭವಾಗಿರುವ ಖಾಸಗಿ ಶಾಲೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವೇತನ ಅನುದಾನಕ್ಕೆ ಒಳಪಡಿಸಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನುಡಿದಂತೆ ನಡೆದಿಲ್ಲ. ಹಾಗಾಗಿ ಏ.27ಕ್ಕೆ ಅನುಮೋದನೆಯಾಗುವ ಪೂರಕ ಬಜೆಟ್ನಲ್ಲಿ ಖಾಸಗಿ ಶಾಲೆಗಳನ್ನು ವೇತನ ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಿದರು.

ಭಾರತೀಯ ಕಿಸಾನ್ ಸಂಘದ ವಿ.ಜಯಪ್ಪ ಮಾತನಾಡಿ, ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುವ ಮೊದಲು ಭರವಸೆ ನೀಡುತ್ತಾರೆ. ಅಧಿಕಾರಕ್ಕೆ ಬಂದ ತಕ್ಷಣ ಅದನ್ನು ಮರೆಯುತ್ತಾರೆ. ಹಾಗಾಗಿ ಇನ್ನಾದರೂ 29 ವರ್ಷಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಕರವೇ ಅಧ್ಯಕ್ಷ ಹುಸೇನ್ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣೆ ಪ್ರಣಾಳಿಕೆಯಲ್ಲಿ ಪ್ರಕಟಿಸಿದ ಹಲವು ಬೇಡಿಕೆಗಳನ್ನು ಇನ್ನೂ ಈಡೇರಿಸಿಲ್ಲ. ಬಾಯಿ ಮಾತಿನಲ್ಲಿ ಕನ್ನಡ ಶಾಲೆಗಳ ಬಗ್ಗೆ ಕಾಳಜಿ ತೋರಿಸಿ, ಅನುದಾನಕ್ಕೆ ಒಡಪಡಿಸಲು ಇಲ್ಲಸಲ್ಲದ ನೆಪವೊಡ್ಡಿ ತಡ ಮಾಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಮುಂದೆ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಂತರ ಉಪ ತಹಶೀಲ್ದಾರ್ ಶ್ರೀಕುಮಾರ್ ಅವರ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಡಿವಿಜಿ ಕನ್ನಡ ಸಂಘದ ಅಧ್ಯಕ್ಷ ಕೆ.ಮಧುಸೂದನ್, ಉಗನಿ ಆರ್.ನಾರಾಯಣಗೌಡ, ಟಿ.ರಾಮಚಂದ್ರಪ್ಪ, ಮುನಿರಾಮಯ್ಯ, ಜಯಲಕ್ಷ್ಮಮ್ಮ, ಚೇತನ್ ಪ್ರಸಾದ್, ನವೀನ್ ಪ್ರಸಾದ್ ಬಾಬು, ಮಾಲತಿ, ವರಲಕ್ಷ್ಮಿ, ವನಜಾಕ್ಷಿ, ನಾಗಮಣಿ, ಎಸ್.ಕವಿತ, ಸುಬ್ರಮಣಿ, ಆನಂದ್, ಮುರಳಿ, ವೆಂಕಟೇಶ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.