ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಲೂರು: ಉತ್ತಮ ಫಲಿತಾಂಶಕ್ಕೆ ವಿಶೇಷ ತರಗತಿ

Published 23 ಫೆಬ್ರುವರಿ 2024, 15:31 IST
Last Updated 23 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ

ಮಾಲೂರು: ತಾಲ್ಲೂಕಿನಲ್ಲಿ 2024ರ ಮಾರ್ಚ್ 25ರಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ಸುತ್ತೋಲೆ ಅನ್ವಯ ಶಾಲೆಗಳಲ್ಲಿ ಬೋಧನೆ ಹಾಗೂ ವಿಶೇಷ ತರಗತಿಗಳು ನಡೆಯಲಿವೆ ಎಂದು ಬಿಇಒ ಎಚ್ಎಸ್ ಚಂದ್ರಕಲಾ ತಿಳಿಸಿದ್ದಾರೆ.  

ರಾತ್ರಿ ಶಾಲೆ ನಡೆಸುವುದರ ಮೂಲಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜು ಗೊಳಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. 

ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 25ರಿಂದ ಪ್ರಾರಂಭವಾಗಲಿವೆ. ತಾಲ್ಲೂಕಿನಲ್ಲಿ 1,626 ಬಾಲಕರು 1,822 ಬಾಲಕಿಯರು ಸೇರಿದಂತೆ ಒಟ್ಟು 3,348 ವಿದ್ಯಾರ್ಥಿಗಳು. ಪಟ್ಟಣದಲ್ಲಿ 5 ಪರೀಕ್ಷಾ ಕೇಂದ್ರಗಳು, ಮಾಸ್ತಿ, ಟೇಕಲ್, ಲಕ್ಕೂರು ತಲಾ ಒಂದೊಂದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಣ ಇಲಾಖೆಯ ಸರ್ಕಾರದ ಸುತ್ತೋಲೆ ಅನ್ವಯ ಈಗಾಗಲೇ ವಿದ್ಯಾರ್ಥಿಗಳ ಪ್ರೇರಣಾ ಸಂವಾದ, ತಾಯಂದಿರ ಸಭೆ ವಿದ್ಯಾರ್ಥಿಗಳನ್ನು ವಿಷಯವಾರು ಶಿಕ್ಷಕರು ದತ್ತು ಪಡೆದು ಓದಿಸುವುದು, ವಿದ್ಯಾರ್ಥಿಗಳ ಹಾಗೂ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಗಾರ. ಶಾಲಾ ಹಂತದಲ್ಲಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಸಹ ನಡೆಸಲಾಗಿದೆ. ಆಯಾ ಶಾಲೆಗಳಲ್ಲಿ ಸಂಜೆ ಬೆಳಿಗ್ಗೆ ವಿಶೇಷ ತರಗತಿಗಳು, ರಾತ್ರಿ ವೇಳೆ ಓದಿಸಲು ರಾತ್ರಿ ತರಗತಿಗಳು ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ 5 ಸೆಟ್ ಪ್ರಶ್ನೆ ಪತ್ರಿಕೆ, ಪ್ರಶ್ನೆ ಕೋಟಿ ನೀಡಿ ಪುನರಾವರ್ತನೆ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ ಬಾರಿ 94.4 ಫಲಿತಾಂಶ ಬಂದಿತ್ತು. ಪ್ರಸಕ್ತ ವರ್ಷ ಶೇ 100ರಷ್ಟು ಫಲಿತಾಂಶಕ್ಕಾಗಿ ಶಿಕ್ಷಕರು ಆಯಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ವಿಷಯವಾರು ತರಬೇತಿ ನೀಡಿ ಸಜ್ಜುಗೊಳಿಸುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ನಕಲು ಆಗದಂತೆ ತಡೆಗಟ್ಟುವ ಸಲುವಾಗಿ, ಸಿಸಿ ಕ್ಯಾಮೆರಾ ಅಳವಡಿಕೆ, ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪಾವಿತ್ರ್ಯ ಕಾಪಾಡಲು ಹಾಗೂ ಶಿಸ್ತಿನಿಂದ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಅನ್ಯ ಇಲಾಖೆ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜಿಸಿದ್ದಾರೆ. ವಿಷಯಾಧಾರಿತ ಶಿಕ್ಷಕರು ವಿದ್ಯಾರ್ಥಿಗಳ ಸಂಶಯಗಳನ್ನು ಬಗೆಹರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT