ಕೋಲಾರ: ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಸಾರ್ವಜನಿಕರು ದೇವಸ್ಥಾನಗಳನ್ನು ವೀಕ್ಷಿಸಲು ರಾಜ್ಯ ರಸ್ತೆ ಸಾರಿಗೆಯಿಂದ ಒಂದು ದಿನದ ಟೂರ್ ಪ್ಯಾಕೇಜ್ ರೂಪಿಸುವಂತೆ ಶಾಸಕ ಕೊತ್ತೂರು ಮಂಜುನಾಥ್, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.

ನಗರದಲ್ಲಿ ಕೆಎಸ್ಆರ್ಟಿಸಿ ಡಿಪೋದಲ್ಲಿ ಶನಿವಾರ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಿಲ್ಲೆಯ ಪ್ರವಾಸಿತಾಣಗಳ ವೀಕ್ಷಿಸಲು ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ಕ್ಷೇತ್ರಗಳ ವೀಕ್ಷಣೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು ಎಂದರು.

ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ದೂರುಗಳು ಸಹಜ. ಯಾವುದನ್ನೂ ತಲೆಕೆಡಿಸಿಕೊಳ್ಳದೇ ಪ್ರಾಮಾಣಿಕವಾಗಿ ಕೆಲಸ ಮಾಡಿ ಉತ್ತಮ ನೌಕರರಾಗಬೇಕು. ಇವತ್ತು ಕೇವಲ 20 ಚಾಲಕರಿಗಷ್ಟೇ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ನೀಡಲಾಗಿದೆ. ಮುಂದೆ ಎಲ್ಲರಿಗೂ ಕೊಡುವ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿ ಎಂದು ಹೇಳಿದರು.

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ‘ರಾಜ್ಯೋತ್ಸವ ಖುಷಿಯಿಂದ ಆಚರಣೆ ಮಾಡಲಾಗುತ್ತದೆ. ಸಾರಿಗೆ ಸಂಸ್ಥೆಯ ಬಸ್ಗಳ ಬಣ್ಣ ಬದಲಾಗಬೇಕು. ಸಾರ್ವಜನಿಕರ ಸ್ನೇಹಿಯಾಗಿ ಸಾರಿಗೆ ಸಂಸ್ಥೆ ಇರಬೇಕು. ಜನರೊಂದಿಗೆ ನಾವು ಎಂಬ ಭಾವನೆ ಬರಬೇಕು’ ಎಂದರು

ಅಪಘಾತ ರಹಿತ ಚಾಲನೆ ಮಾಡಿದ 20 ಚಾಲಕರನ್ನು ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.

ಕೋಲಾರ ವಿಭಾಗೀಯ ಕಾರ್ಯಾಗಾರದಲ್ಲಿ ಸ್ತಬ್ಧಚಿತ್ರವನ್ನು ತಯಾರಿಸಿದ್ದು, ಇದರಲ್ಲಿ ಕನ್ನಡ ಭಾಷೆಯ, ನಿಗಮದ ಮತ್ತು ಕೋಲಾರ ಜಿಲ್ಲೆಯ ಎಲ್ಲಾ ಆರೂ ತಾಲ್ಲೂಕುಗಳ ವಿಷಯ ಬಿಂಬಿಸಲಾಗಿತ್ತು. ಏಳು ವಿವಿಧ ರೀತಿಯ ಬಸ್ಗಳ ಥ್ರೀ-ಡಿ ಮಾದರಿ ಸಹ ಪ್ರದರ್ಶಿಸಲಾಗಿತ್ತು. ಇಬ್ಬರು ಮಹಿಳಾ ತಾಂತ್ರಿಕ ಸಿಬ್ಬಂದಿ ಭುವನೇಶ್ವರಿ ರೀತಿ ವೇಷ ಧರಿಸಿದ್ದರು. ಮೆರವಣಿಗೆಯಲ್ಲಿ ಈ ಸ್ತಬ್ಧಚಿತ್ರ ಗಮನ ಸೆಳೆಯಿತು.

ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕರಾದ ಚಂಜಿಮಲೆ ರಮೇಶ್, ಷಂಷೀರ್, ಕಸಾಪ ಜಿಲ್ಲಾಧ್ಯಕ್ಷ ಗೋಪಾಲಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.