ಬುಧವಾರ, ಏಪ್ರಿಲ್ 14, 2021
24 °C

ವರ್ತೂರು ಪ್ರಕಾಶ್‌ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಕವಿರಾಜ್‌ ಭೂಗತ ಪಾತಕಿಯ ಸಹಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಕವಿರಾಜ್‌ ಈ ಹಿಂದೆ ಭೂಗತ ಪಾತಕಿ ರವಿ ಪೂಜಾರಿಯ ಸಹಚರನಾಗಿದ್ದ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

ಕವಿರಾಜ್‌ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಗುಂಪು ಕಟ್ಟಿಕೊಂಡು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳನ್ನು ಎಸಗಿದ್ದ. ಆತನ ವಿರುದ್ಧ ಬೆಂಗಳೂರಿನ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಪಿಯುಸಿ ಓದಿರುವ ಕವಿರಾಜ್‌ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತಿದ್ದ. ಮೂಲತಃ ನೇಪಾಳದ ಆತ ತಮಿಳುನಾಡಿನ ಚೆನ್ನೈ ಹಾಗೂ ಹೊಸೂರು ಸುತ್ತಮುತ್ತ ಭೂ ವ್ಯವಹಾರ ಮಾಡುತ್ತಿದ್ದ. ಈತ ವರ್ತೂರು ಪ್ರಕಾಶ್‌ ಅವರಿಗೆ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ಕವಿರಾಜ್‌ ಹಣಕ್ಕಾಗಿ ಸಂಚು ರೂಪಿಸಿ 8 ಮಂದಿಯ ಗುಂಪು ಕಟ್ಟಿಕೊಂಡು ವರ್ತೂರು ಪ್ರಕಾಶ್‌ರನ್ನು ಅಪಹರಿಸಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಹರಣಕಾರರು ವರ್ತೂರು ಪ್ರಕಾಶ್‌ರನ್ನು ಚಿಂತಾಮಣಿ ಮತ್ತು ಶ್ರೀನಿವಾಸಪುರ ಸುತ್ತಮುತ್ತ ಸುತ್ತಾಡಿಸಿದ್ದರು. ತಮಿಳುನಾಡಿಗೆ ಪರಾರಿಯಾಗಿದ್ದ ಕವಿರಾಜ್‌ನನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿಯಲಾಯಿತು. ವರ್ತೂರು ಪ್ರಕಾಶ್‌ ಅವರನ್ನು ಕೊಲೆ ಮಾಡುವ ಉದ್ದೇಶವಿರಲಿಲ್ಲ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು