ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಸಿ ವ್ಯಾಲಿ ನೀರು: ಪುನರ್‌ ಪರಿಶೀಲಿಸಿ

Last Updated 14 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಕೋಲಾರ: ನಗರದ ಹೊರವಲಯದ ಮಡೇರಹಳ್ಳಿ ಮತ್ತು ಅಮ್ಮೇರಹಳ್ಳಿ ಕೆರೆಗೆ ಕೆ.ಸಿ ವ್ಯಾಲಿ ಯೋಜನೆ ನೀರು ಹರಿಸುವ ಬಗ್ಗೆ ಪುನರ್‌ ಪರಿಶೀಲನೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ದೇವರಾಜು ಅರಸು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ರಾಮರಾಜು ಮನವಿ ಮಾಡಿದ್ದಾರೆ.

ಮಡೇರಹಳ್ಳಿ ಮತ್ತು ಅಮ್ಮೇರಹಳ್ಳಿ ಕೆರೆಯು ಕೋಲಾರ ನಗರದ ಕುಡಿಯುವ ನೀರಿನ ಆಸರೆಯಾಗಿವೆ. ಕೆರೆಗಳಿಂದ ಹಾಗೂ ಕೆರೆ ಅಂಗಳದ ಕೊಳವೆ ಬಾವಿಗಳಿಂದ ನಗರಕ್ಕೆ ನೀರು ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಯಾಗದ ಕಾರಣ ಈ ಕೆರೆಗಳು ತುಂಬಿಲ್ಲ. ಹೀಗಾಗಿ ಕೋಲಾರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಸಿ ವ್ಯಾಲಿ ಯೋಜನೆ ನೀರನ್ನು ಸದ್ಯ ಎರಡು ಹಂತದಲ್ಲಿ ಸಂಸ್ಕರಿಸಲಾಗುತ್ತಿದ್ದು, ಈ ನೀರು ಕುಡಿಯಲು ಮತ್ತು ಗೃಹ ಬಳಕೆಗೆ ಯೋಗ್ಯವಲ್ಲ ಎಂದು ಸಂಶೋಧನಾಲಯಗಳು ವರದಿ ನೀಡಿವೆ. ಇಂತಹ ಸಂದರ್ಭದಲ್ಲಿ ಎರಡೂ ಕೆರೆಗಳಿಗೆ ಕೆ.ಸಿ ವ್ಯಾಲಿ ನೀರು ಹರಿಸಿದರೆ ಅಂತರ್ಜಲ ಕಲುಷಿತಗೊಂಡು ಭವಿಷ್ಯದಲ್ಲಿ ಸಮಸ್ಯೆಯಾಗುತ್ತದೆ. ನಗರವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ಹೇಳಿದ್ದಾರೆ.

ಕೆರೆಗಳ ಅಂಗಳದ ಕೊಳವೆ ಬಾವಿಗಳ ನೀರಿನ ಜತೆ ಕೆ.ಸಿ ವ್ಯಾಲಿ ಯೋಜನೆಯ ವಿಷಕಾರಿ ನೀರು ಸೇರುತ್ತದೆ. ಎತ್ತಿನಹೊಳೆ ಹಾಗೂ ಯರಗೋಳ್‌ ಯೋಜನೆ ಪೂರ್ಣಗೊಂಡ ನಂತರ ಜಿಲ್ಲೆಗೆ ಶುದ್ಧ ನೀರು ಬರಲಿದ್ದು, ಭವಿಷ್ಯದಲ್ಲಿ ನೀರಿನ ಶೇಖರಣೆಗೆ ನಗರದ ಸುತ್ತಮುತ್ತ ಕೆರೆಗಳು ಇಲ್ಲದಂತಾಗುತ್ತದೆ. ಆದ್ದರಿಂದ ಶಾಸಕ ಕೆ.ಶ್ರೀನಿವಾಸಗೌಡ ಅವರು ಅಮ್ಮೇರಹಳ್ಳಿ ಹಾಗೂ ಮಡೇರಹಳ್ಳಿ ಕೆರೆಗೆ ಕೆ.ಸಿ ವ್ಯಾಲಿ ನೀರು ಹರಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT