ಭಾನುವಾರ, ಮೇ 16, 2021
22 °C

ಕೆ.ಸಿ.ವ್ಯಾಲಿ ನೀರು ಹರಿಸಲು ಹೈಕೋರ್ಟ್ ಹಸಿರು ನಿಶಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋಲಾರ ಜಿಲ್ಲೆಯ ಕೆರೆಗಳಿಗೆ ಕೆ.ಸಿ (ಕೋಲಾರ-ಚಲ್ಲಘಟ್ಟ) ವ್ಯಾಲಿಯ ಸಂಸ್ಕರಿತ ತ್ಯಾಜ್ಯ ನೀರು ಹರಿಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ.

ಈ ಕುರಿತಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಆದೇಶಿಸಿದೆ.

ಈ ಮೊದಲು ನೀರು ಹರಿಸದಂತೆ ನಿರ್ಬಂಧ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ನ್ಯಾಯಪೀಠ ಇದೇ ವೇಳೆ ತೆರವುಗೊಳಿಸಿತು.

ಐಐಎಸ್ಸಿ ವರದಿ ಸಲ್ಲಿಕೆ:
‘ಸರ್ಕಾರ ಅಂತರ್ಜಲದ ಪರೀಕ್ಷೆ ನಡೆಸಿಲ್ಲ‌‌. ಮೇಲ್ಮೈ ನೀರಿನ ಪರೀಕ್ಷಾ ಮಾಡಿ ಕೋರ್ಟ್ ಗೆ ವರದಿ ನೀಡಿದೆ’ ಎಂದು ನಿನ್ನೆಯಷ್ಟೇ  ಬಲವಾಗಿ ಆಕ್ಷೇಪಿಸಿದ್ದ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್, ಶುಕ್ರವಾರ ಐಐಎಸ್ಸಿ (ಭಾರತೀಯ ವಿಜ್ಞಾನ ಸಂಸ್ಥೆ) ತಜ್ಞರಿಂದ ಪರೀಕ್ಷಿಸಿದ ನೀರಿನ ಗುಣಮಟ್ಟದ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಗುಣಮಟ್ಟ ಕಾಪಾಡಿ: ‘ಸರ್ಕಾರದ ಮಾತಿನ ಮೇಲೆ ನಂಬಿಕೆ ಇರಿಸಿ ನೀರು ಹರಿಸಲು ಈ  ನಿರ್ದೇಶನ ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ಹೇಳಿದೆ.

‘ಗುಣಮಟ್ಟ ಕಾಪಾಡಿಕೊಳ್ಳಲು ನಿಗಾ ವಹಿಸಿ. ಈ ಕುರಿತು15 ದಿನಗಳ ಬಳಿಕ ಕೋರ್ಟ್ ಗೆ ವರದಿ ಸಲ್ಲಿಸಿ’ ಎಂದೂ ಸೂಚಿಸಿದೆ.

ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು