ಕೆಜಿಎಫ್: ಸಂವಿಧಾನ ಸಮರ್ಪಣೆ ದಿನದಂದು ಬಾಬಾ ಸಾಹೇಬರಿಗೆ ಸೂಕ್ತ ಗೌರವ ನೀಡಿಲ್ಲ. ಸಂವಿಧಾನ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆ ಮುಖಂಡರು ತಾಲ್ಲೂಕು ಆಡಳಿತ ಸೌಧದ ಮುಂಭಾಗ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಶಾಸಕಿ ಎಂ.ರೂಪಕಲಾ ಅವರು ತಾಲ್ಲೂಕು ಆಡಳಿತ ಸೌಧದಲ್ಲಿ ನಡೆಸಿದ ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮದಲ್ಲಿ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ನೆರೆಯ ತಾಲ್ಲೂಕುಗಳಲ್ಲಿ ಸಂವಿಧಾನ ಸಮರ್ಪಣೆ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ, ತಾಲ್ಲೂಕಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಆಚರಣೆ ಮಾಡಲಾಗುತ್ತಿದೆ. ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.

ಮುಖಂಡರಾದ ಶ್ರೀನಾಥ್, ಎಪಿಎಲ್ ರಂಗನಾಥ್, ಕೃಷ್ಣಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.