ಕೆಜಿಎಫ್: ಬಿಜಿಎಂಎಲ್ ಸಂಸ್ಥೆಗೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿಕೊಳ್ಳುತ್ತಿದ್ದಾರೆ. ಇಂತಹ ಒತ್ತುವರಿದಾರರಿಗೆ ಬಿಜಿಎಂಎಲ್ ಅಧಿಕಾರಿಗಳು ರಕ್ಷಣೆ ನೀಡುತ್ತಿದ್ದಾರೆ ಎಂದು ಮಾನವ ಹಕ್ಕುಗಳ ಸಂಘಟನೆ ಮುಖಂಡ ಎಲ್. ಬಾಬು ಆರೋಪಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜಿಎಂಎಲ್ಗೆ ಸೇರಿದ ಸಾವಿರಾರು ಎಕರೆ ಜಮೀನು ಸರ್ಕಾರದ ಕೈತಪ್ಪುವ ಸಾಧ್ಯತೆ ಇದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ 3 ಸಾವಿರ ಎಕರೆ ಮತ್ತು ಕೆಜಿಎಫ್ ತಾಲ್ಲೂಕಿನಲ್ಲಿ ಒಂದೂವರೆ ಸಾವಿರ ಎಕರೆ ಜಮೀನು ಒತ್ತುವರಿಯಾಗಿದೆ. ಒತ್ತುವರಿಯಾದ ಜಾಗಕ್ಕೆ ಕಂದಾಯ ಇಲಾಖೆ ಪಹಣಿ ಮಾಡಿಕೊಟ್ಟಿದೆ. ಬಿಜಿಎಂಎಲ್ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕೇಂದ್ರ ಸರ್ಕಾರ ಮತ್ತು ಸಂಸದ ಮಲ್ಲೇಶಬಾಬು ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜಿಎಂಎಲ್ ಕಾರ್ಮಿಕರು ತಮ್ಮ ಮನೆಗಳನ್ನು ಸ್ವಂತ ಮಾಡಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಎಸ್ಟಿಬಿಪಿ ಯೋಜನೆಯಡಿ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ಮಾತ್ರ ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗೆ ನೀಡಿದ ಮನೆಗಳಿಗೆ ಸ್ವಾಧೀನ ಪತ್ರ ನೀಡಲಾಗಿದೆಯೇ ಹೊರೆತು ಅವರಿಗೆ ಇನ್ನೂ ಇ–ಖಾತೆ ಮಾಡಿಕೊಟ್ಟಿಲ್ಲ. ನೂರಾರು ವರ್ಷಗಳಿಂದ ಗಣಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಕಾರ್ಮಿಕರ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಇನ್ನೂ ಮನೆಗಳ ಸ್ವಾಧೀನ ಪತ್ರ ನೀಡಿಲ್ಲ. ಯಾವುದೇ ಮೂಲ ಸೌಕರ್ಯಗಳಿಲ್ಲದ ಮನೆಗಳಲ್ಲಿ ಅವರು ವಾಸ ಮಾಡುತ್ತಿದ್ದಾರೆ. ಅವರು ಶೋಷಣೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದರು.

ಗಣಿ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅನಧಿಕೃತ ಕಟ್ಟಡಗಳು ತಲೆ ಎತ್ತುತ್ತಿವೆ. ಗಣಿ ಪ್ರದೇಶದಲ್ಲಿ ಎತ್ತರದ ಕಟ್ಟಡ ಕಟ್ಟಲು ಅನುಮತಿ ಇಲ್ಲ. ಆದರೂ ರಾಜಾರೋಷವಾಗಿ ಎರಡು, ಮೂರು ಅಂತಸ್ತಿನ ಮನೆಗಳು ನಿರ್ಮಾಣವಾಗುತ್ತಿವೆ. ಸುಮಾರು 127 ಮನೆಗಳಿಗೆ ಸಿಮೆಂಟ್ ಕಾಂಕ್ರಿಟ್ನಿಂದ ಮೇಲ್ಛಾವಣಿ ಹಾಕಲಾಗಿದೆ. ಇಂತಹ ಮನೆಗಳಿಗೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಜಿಎಂಎಲ್ ಅಧಿಕಾರಿಗಳು ವ್ಯವಹಾರ ಕುದುರಿಸಿಕೊಂಡು ಅಕ್ರಮ ಕಟ್ಟಡಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿ ತಿಂಗಳು ಕೇಂದ್ರ ಗಣಿ ಇಲಾಖೆ ₹1.5 ಕೋಟಿಯನ್ನು ಭದ್ರತಾ ವ್ಯವಸ್ಥೆಗೆ ಮಂಜೂರು ಮಾಡುತ್ತಿದೆ. ನೂರಾರು ಭದ್ರತಾ ಸಿಬ್ಬಂದಿ ಇದ್ದರೂ, ಅತಿಕ್ರಮಣ ತಡೆಗಟ್ಟಲು ಸಾಧ್ಯವಾಗಿಲ್ಲ ಏಕೆ? ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಸಂಬಂಧಿಸಿದ ಇಲಾಖೆಗೆ ದೂರು ಸಲ್ಲಿಸಿದೆ. ಸಂಸದ ಮಲ್ಲೇಶಬಾಬು ಕೂಡಲೇ ಮಧ್ಯಪ್ರವೇಶಿಸಿ, ಸರ್ಕಾರದ ಜಾಗ ಉಳಿಸಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-18-193356668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.