ಕೆಜಿಎಫ್: ಬಿಹಾರದಿಂದ ಅಕ್ರಮವಾಗಿ ಮಕ್ಕಳನ್ನು ಸಾಗಾಣಿಕೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಬಂಗಾರಪೇಟೆ ಪೊಲೀಸರು ಆರೋಪಿಗಳನ್ನು ಸುರಕ್ಷಿತವಾಗಿ ಬಿಹಾರಕ್ಕೆ ಕಳಿಸಿಕೊಟ್ಟಿದ್ದಾರೆಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರಿಗೆ ಶುಕ್ರವಾರ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಏ.29 ರಂದು 42 ಮಕ್ಕಳು ಪತ್ತೆಯಾಗಿದ್ದರು. ಅವರನ್ನು ಬಂಗಾರಪೇಟೆ ರೈಲ್ವೆ ಪೊಲೀಸರು ಕೆಜಿಎಫ್ ಬಾಲಮಂದಿರಕ್ಕೆ ಕಳಿಸಿದ್ದರು. ಈ ಬಗ್ಗೆ ಮೇ 5ರಂದು ಶ್ರೀರಾಮಸೇನೆಯಿಂದ ಜಿಲ್ಲಾಡಳಿತಕ್ಕೆ ಮನವಿ ನೀಡಿ, ಅಕ್ರಮವಾಗಿ ಮಕ್ಕಳನ್ನು ಕರೆತಂದವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ಮಕ್ಕಳನ್ನು ಅಕ್ರಮವಾಗಿ ರೈಲಿನಲ್ಲಿ ಕರೆದುಕೊಂಡು ಬಂದವರ ಮೇಲೆ ಅಪಹರಣದ ದೂರು ದಾಖಲಾಗಬೇಕೆಂದು ಮನವಿ ಸಲ್ಲಿಸಲಾಗಿತ್ತು.

ಆದರೆ, ನಮ್ಮ ಮನವಿಯನ್ನು ಪುರಸ್ಕರಿಸಿದ ಪೊಲೀಸರು, ರಾಜಕೀಯ ಒತ್ತಡದಿಂದ ಆರೋಪಿಗಳನ್ನು ಅದೇ ರಾತ್ರಿ ರೈಲಿನಲ್ಲಿ ಬಿಹಾರಕ್ಕೆ ವಾಪಸ್ ಕಳಿಸಿಕೊಟ್ಟು, ಆರೋಪಿಗಳನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ದೂರು ನೀಡಲಾಗಿದೆ. ಪೊಲೀಸರಿಗೆ ಒಂದು ವಾರದ ಸಮಯಾವಕಾಶ ನೀಡಲಾಗುವುದು. ಅಷ್ಟರೊಳಗೆ ಪೊಲೀಸರು ಕ್ರಮ ಕೈಗೊಳ್ಳದೆ ಇದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶ್ರೀಧರರಾವ್ ಶಿಂಧೆ, ಉಮೇಶ್, ಡಾ.ಮಂಜುನಾಥ್, ರಾಜೇಶ್, ರಾಜಣ್ಣ, ಲೋಕೇಶ್, ಪಾಂಡವ ಮೂರ್ತಿ, ಜಯಪ್ರಕಾಶ್, ಸುಬ್ಬಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-18-429169901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.