ಕೆಜಿಎಫ್: ನೈಜ ಸಾಗುವಳಿ ಚೀಟಿ ಹೊಂದಿರುವ ರೈತರಿಗೆ ಖಾತೆ ಮಾಡುವ ಜೊತೆಗೆ ಪಿ.ನಂಬರ್ ದುರಸ್ತಿ ಮಾಡಲು ವಿಶೇಷ ತಂಡ ರಚನೆ ಮಾಡಬೇಕು. ಸರ್ಕಾರಿ ಅಸ್ತಿಗಳನ್ನು ಮಾರಾಟ ಮಾಡಲು ಹುನ್ನಾರ ನಡೆಸಿರುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮಂಗಳವಾರ ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

‘ಕೆಲ ಕಂದಾಯ ಅಧಿಕಾರಿಗಳು ಕಚೇರಿಗಳಲ್ಲಿ ದಲ್ಲಾಳಿಗಳನ್ನು ನೇಮಕ ಮಾಡಿಕೊಂಡು ಹಣ ವಸೂಲಿಗೆ ಇಳಿದಿದ್ದಾರೆ. ಭೂಮಿಯ ಅಕ್ರಮ ಸಕ್ರಮವಾಗುತ್ತದೆ ಎಂದು ಕಾಯುತ್ತಿರುವ ಸಾವಿರಾರು ಬಡವರಿಗೆ ನ್ಯಾಯ ಸಿಗುತ್ತಿಲ್ಲ. ಪಿ.ನಂಬರ್ ದುರಸ್ತಿ ಮಾಡಬೇಕಾದರೆ ಕಡತಕ್ಕೆ ಲಕ್ಷಗಟ್ಟಲೆ ಹಣ ನಿಗದಿ ಮಾಡಿದ್ದಾರೆ. ದಾಖಲೆಗಳನ್ನು ರೈತರಿಗೆ ನೀಡಲು ಸಹ ಸತಾಯಿಸಲಾಗುತ್ತಿದೆ’ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

ಅಕಾಲಿಕ ಆಲಿಕಲ್ಲು ಮಳೆಯಿಂದ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ಪ್ರತಿ ಏಕರೆಗೆ ₹2 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ನಂತರ ಉಪ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ನೀಡಲಾಯಿತು. ಮುಖಂಡರಾದ ವೇಣು, ಈಕಂಬಳ್ಳಿ ಮಂಜುನಾಥ್, ಫಾರುಕ್ ಪಾಷ, ರಾಜೇಶ್, ಸುರೇಶ್, ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-18-1671383331

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.