ಕೆಜಿಎಫ್: ರಾಬರ್ಟಸನ್ಪೇಟೆ ನಗರಸಭೆ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ನಿಲುಗಡೆಯಾಗುವ ಬೈಕ್ ಮತ್ತಿತರ ವಾಹನಗಳನ್ನು ಕೂಡಲೇ ನಿಷೇಧ ಮಾಡಲಾಗಿದೆ. ನಿಯಮ ಉಲ್ಲಂಘನೆ ಮಾಡಿ ನಿಲ್ಲಿಸುವ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾದ ‘ಬಸ್ ನಿಲ್ದಾಣದ ದುಸ್ಥಿತಿ’ ಕುರಿತ ವರದಿ ಹಿನ್ನೆಲೆಯಲ್ಲಿ ಮುಂಜಾನೆ ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ ಮತ್ತು ನಗರಸಭೆ ಸಿಬ್ಬಂದಿಯೊಂದಿಗೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಬಸ್ ನಿಲ್ದಾಣದ ಸ್ವಚ್ಛತೆ ಉಸ್ತುವಾರಿ ವಹಿಸಿಕೊಂಡರು. ಬಸ್ ನಿಲ್ದಾಣದಲ್ಲಿ ಮಲಗುವ ನಿರಾಶ್ರಿತರನ್ನು ನಿರ್ಗತಿಕರ ಕೇಂದ್ರಕ್ಕೆ ರವಾನಿಸಬೇಕು. ಖಾಸಗಿ ಬಸ್ಗಳನ್ನು ನಿಲ್ದಾಣದಲ್ಲಿ ತೊಳೆಯುವುದನ್ನು ಕೂಡ ತಡೆಗಟ್ಟಬೇಕು. ನಿಯಮ ಉಲ್ಲಂಘನೆ ಮಾಡಿ ವಾಹನಗಳನ್ನು ನಿಲ್ಲಿಸಿದರೆ ₹2ಸಾವಿರ ದಂಡ ವಿಧಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಬಸ್ ನಿಲ್ದಾಣದ ಸುತ್ತಮುತ್ತ ಇರುವ ಅಂಗಡಿ ಮಾಲೀಕರು ತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ಇದೇ ಸಂದದರ್ಭದಲ್ಲಿ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.