ಕೆಜಿಎಫ್: ತಾಲ್ಲೂಕಿನ ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿಯ ಕೆಂಪಾಪುರ ಗ್ರಾಮದಿಂದ ಕೆ.ಗೊಲ್ಲಹಳ್ಳಿ (ಆಂಧ್ರದ ಗಡಿ) ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಎಂ.ರೂಪಕಲಾ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, 2023-24ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿ ಈ ರಸ್ತೆ ಮಂಜೂರಿಯಾಗಿದೆ. ಆದರೆ, ಹಲವು ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ಪ್ರಾರಂಭ ವಿಳಂಬವಾಗಿದೆ. ರಸ್ತೆಯನ್ನು ₹ 60 ಲಕ್ಷ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಗಡಿ ಭಾಗದಲ್ಲಿರುವ ಈ ರಸ್ತೆಯು ಆಂಧ್ರಪ್ರದೇಶದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಈ ರಸ್ತೆಯು ತೀರಾ ಹಾಳಾಗಿದ್ದು, ಅಭಿವೃದ್ಧಿ ಪಡಿಸಲು ಸಾರ್ವಜನಿಕರು ಒತ್ತಾಯಿಸಿದ್ದರು. ಅವರ ಕೋರಿಕೆಯ ಆದ್ಯತೆ ಮೇರೆಗೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-18-1329495912

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.