ಕೆಜಿಎಫ್: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ಫ್ಯಾಷನ್ ಶೋನಲ್ಲಿ ಪಾಲ್ಗೊಂಡರು.

ಬೆಕ್ಕಿನ ನಡಿಗೆಯಲ್ಲಿ ಬಂದ ವಿದ್ಯಾರ್ಥಿನಿಯರು, ತಾವು ಯಾವ ಮಾಡೆಲ್ಗೂ ಕಡಿಮೆ ಇಲ್ಲ ಎಂಬಂತೆ ರ್ಯಾಂಪ್ನಲ್ಲಿ ಮಿಂಚಿದರು. ಅದಕ್ಕೆ ತಕ್ಕಂತೆ ಆಧುನಿಕ ಉಡುಪು ಧರಿಸಿದ್ದರು. ಅದರ ಜೊತೆಗೆ ಭಾರತೀಯ ಸಂಸ್ಕೃತಿ ಬಿಂಬಿಸುವ ಸಾಂಪ್ರದಾಯಿಕ ಉಡುಗೆಗಳನ್ನು ಕೂಡ ತೊಟ್ಟು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ಕೆಲವು ತ್ಯಾಜ್ಯ ವಸ್ತುಗಳಿಂದ ತಯಾರು ಮಾಡಿದ ಉಡುಪುಗಳನ್ನು ಧರಿಸಿ, ಸೃಜನಶೀಲತೆಯನ್ನು ಅಭಿವ್ಯಕ್ತಪಡಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ನಾರಾಯಣ್, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿತೊಡಗಿಸಿಕೊಳ್ಳುವುದರಿಂದ ಕ್ರಿಯಾಶೀಲತೆ ಹೆಚ್ಚಲಿದೆ ಎಂದು ಹೇಳಿದರು.

ಇಂತಹ ಕಾರ್ಯಕ್ರಮಗಳು ನಮ್ಮ ಕಾಲೇಜಿನಲ್ಲಿನ ಪ್ರತಿಭೆಗಳಿಗೆ ವೇದಿಕೆಯಾಗಲಿದೆ ಎಂದರು.

ಇದೇ ವೇಳೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-731643897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.