ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌ ಸರ್ಕಾರಿ ಆಸ್ಪತ್ರೆ ಕಾರ್ಯವೈಖರಿಗೆ ಮೆಚ್ಚುಗೆ

Last Updated 30 ಮೇ 2022, 4:36 IST
ಅಕ್ಷರ ಗಾತ್ರ

ಕೆಜಿಎಫ್‌: ರಾಬರ್ಟಸನ್‌ಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಮತ್ತು ಸೌಲಭ್ಯ ಒದಗಿಸುತ್ತಿದ್ದು, ಇತರೇ ಆಸ್ಪತ್ರೆಗಳಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ನಾಗರಾಜ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ವಿಶೇಷ ಉಪ ಕಾರಾಗೃಹ, ಬಾಲಮಂದಿರ ಮತ್ತು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸುರೇಶ್‌ ಕುಮಾರ್ ಅವರಿಂದ ಮಾಹಿತಿ ನೀಡಿದರು. ಆಸ್ಪತ್ರೆಯ ವಾರ್ಡ್‌ಗಳು, ತುರ್ತುಚಿಕಿತ್ಸಾ ಘಟಕ, ಔಷಧಿ ವಿತರಣೆ ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳನ್ನು ಮಾತನಾಡಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡಿರುವ ಬಗ್ಗೆ ಶ್ಲಾಘಿಸಿದರು.

ಬಾಲಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಾಖಲಾಗಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ಅಡುಗೆ ರುಚಿಯನ್ನು ಸವಿದರು. ಬಾಲಮಂದಿರದ ಕೆಲವೆಡೆ ಗಾಳಿ, ಬೆಳಕು ಬರುತ್ತಿಲ್ಲ. ಗೋಡೆಗಳಲ್ಲಿ ಸ್ವಚ್ಛತೆ ಇಲ್ಲ. ನಲ್ಲಿಗಳಲ್ಲಿ ನೀರು ಸರಾಗವಾಗಿ ಹರಿದುಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಕಟ್ಟಡವು ಕೆಲವು ಕಡೆ ಶಿಥಿಲವಾಗಿರುವುದನ್ನು ಗಮನಿಸಿದರು. ಹೊಸ ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಪಡೆದರು.

ಬಾಲಮಂದಿರದ ಅಧೀಕ್ಷರು ಗಡ್ಡ ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ‘ಮಕ್ಕಳ ಯೋಗಕ್ಷೇಮ ನೋಡುವ ನೀವು ಸ್ವಚ್ಛತೆಯಿಂದ ಇರಬೇಕು’ ಎಂದರು.

ನ್ಯಾಯಾಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ, ಮಹೇಶ್ ಶಂ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT