ಕೆಜಿಎಫ್: ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಇದನ್ನು ನಿಲ್ಲಿಸದಿದ್ದಲ್ಲಿ ಶಾಸಕಿ ರೂಪಕಲಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿದೆ.

ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಸದಸ್ಯರು, ಹಳ್ಳಿಗಳ ಅಂಗಡಿಗಳಲ್ಲಿ, ರಸ್ತೆ ಬದಿಯ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಬೆಳಗ್ಗೆ 6 ಗಂಟೆಗೆ ಮದ್ಯದ ಅಂಗಡಿಗಳು ಬಾಗಿಲು ತೆಗೆಯುತ್ತಿವೆ. ಇದರಿಂದಾಗಿ ದುಡಿಯುವ ಗಂಡಸರು ಮದ್ಯಕ್ಕೆ ದಾಸರಾಗುವ ಪರಿಸ್ಥಿತಿ ಉದ್ಘವಿಸಿದೆ. ಗಂಡಸರ ಸಂಪಾದನೆಯಲ್ಲವೂ ಮದ್ಯದ ಖರೀದಿಗೆ ಹೋಗುತ್ತಿದೆ. ಈ ಸಂಬಂಧ ಅಬಕಾರಿ ಇಲಾಖೆಗೆ ಹಲವು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಈಗಲಾದರೂ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು.

ವೇಣು, ಶೈಲಜ, ಕೆ.ನಾರಾಯಣಗೌಡ, ಈಕಂಬಳ್ಳಿ ಮಂಜುನಾಥ್, ಸುರೇಶ್ ಬಾಬು, ಪುತ್ತೇರಿ ರಾಜು, ಗಿರೀಶ, ರತ್ನಮ್ಮ, ಗೌರಮ್ಮ, ಚೌಡಮ್ಮ, ಸುಶೀಲಮ್ಮ, ಪವಿತ್ರ, ವೆಂಕಟಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-18-1403409747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.