ಕೆಜಿಎಫ್| ನರೇಗಾ ಕಾಮಗಾರಿ ವೀಕ್ಷಣೆ

ಕೆಜಿಎಫ್: ನರೇಗಾ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಜಂಟಿ ನಿರ್ದೇಶಕ ಅಮಿತ್ ಕೊಠಾರಿಯಾ ಸೋಮವಾರ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಲ ದಿನಗಳ ಹಿಂದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದ ಪೆದ್ದಪಲ್ಲಿ ಕೆರೆಗೆ ಭೇಟಿ ನೀಡಿದ ಕೇಂದ್ರದ ತಂಡವು, ಕೆರೆಯನ್ನು ನರೇಗಾ ಯೋಜನೆಯಡಿ ಅಭಿವೃದ್ಧಿ
ಪಡಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋತರಾಜನಹಳ್ಳಿ ಕೆರೆಗೆ ಭೇಟಿ ನೀಡಿದರು. ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಿದ ಕಾರ್ಮಿಕರ ಜೊತೆ ಸಂವಾದ ನಡೆಸಿದರು. ರೈತರೊಬ್ಬರಿಗೆ ಸೇರಿದ ಶೆಡ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.
ನರೇಗಾ ಯೋಜನೆಯಲ್ಲಿ ದಿನಕ್ಕೆ ಕೇವಲ ₹309 ನೀಡಲಾಗುತ್ತಿದೆ. ವರ್ಷಕ್ಕೆ ನೂರು ದಿನ ಮಾತ್ರ ಕೂಲಿ ಸಿಗುತ್ತಿದೆ. ಈಗ ತೋಟ ಇಲ್ಲವೇ ಇತರ ಕೃಷಿ ಚಟುವಟಿಕೆಗಳಿಗೆ ಹೋದರೆ
ಕನಿಷ್ಠ ₹400 ಕೂಲಿ ಇದೆ. ಆದ್ದರಿಂದ ಕೂಲಿ ಹೆಚ್ಚು ಮಾಡಬೇಕು ಎಂದು
ಗ್ರಾಮಸ್ಥರು ಕೋರಿದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಕೊಠಾರಿಯಾ ಹೇಳಿದರು.
ರಾಜ್ಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತೆ ಶಿಲ್ಪ ನಾಗ್, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ನಿರ್ದೇಶಕ ಗೋಯ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ , ಮಂಜುನಾಥ ಎಪಿಒ ಕೃಷ್ಣಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕುಮಾರ್, ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯ, ಗ್ರಾಮ ಪಂಚಾಯಿತಿ ಸದಸ್ಯರಾದ ಅಪ್ಪಿ, ಶ್ರೀರಾಮ ರೆಡ್ಡಿ, ಗೌರಮ್ಮ, ಇಂಜಿನಿಯರ್ ಭದ್ರಾಚಾರಿ , ವೆಂಕಟೇಶ್,
ವೆಂಕಟಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.