ಕೆಜಿಎಫ್: ತಾಲ್ಲೂಕಿನಲ್ಲಿ ನಡೆಯುತ್ತಿರುವ ಅವ್ಯವಹಾರ ಮತ್ತು ಭ್ರಷ್ಟಾಚಾರದ ಬಗ್ಗೆ ಜನ ಬೇಸತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಎಂಎಲ್ಎ ಮತ್ತು ಸೂಪರ್ ಎಂಎಲ್ಎಗಳನ್ನು ತಾಲ್ಲೂಕಿನ ಜನತೆ ವಾಪಸ್ ಕಳಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೋಲಾರ ಜಿಲ್ಲೆಗೆ ಜಲ ಜೀವನ್ ಮಿಷನ್ ಯೋಜನೆಯನ್ನು ತಂದಿದೆ. ಇಲ್ಲಿ ಸೂಪರ್ ಎಂಎಲ್ಎಗಳು ಗುತ್ತಿಗೆದಾರರನ್ನು ಕಮಿಷನ್ಗಾಗಿ ಪೀಡಿಸುತ್ತಿದ್ದಾರೆ. ಇದರಿಂದ ಕೆಲವೆಡೆ ಗುತ್ತಿಗೆದಾರರು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಎಪಿಎಂಎಸಿ ಜಾಗದಲ್ಲಿ ಅಕ್ರಮವಾಗಿ ಕಪ್ಪು ಕಲ್ಲು ಗಣಿಗಾರಿಕೆ ನಡೆಸಿ, ಕೋಟ್ಯಂತರ ಲೂಟಿ ಮಾಡಲಾಗಿದೆ. ಇನ್ನು ತಾಲ್ಲೂಕಿನಲ್ಲಿ ಅಭಿವೃದ್ಧಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಅಂಬೇಡ್ಕರ್ ಅವರು ರಾಜ್ಯದಲ್ಲಿ ಭೇಟಿ ನೀಡಿದ್ದ ಜಾಗದಲ್ಲಿ ಸ್ಮಾರಕಗಳನ್ನು ನಿರ್ಮಿಸಲು ಹಣ ಬಿಡುಗಡೆ ಮಾಡಲಾಗಿತ್ತು. ಕೆಜಿಎಫ್ ನಗರಕ್ಕೆ ಕೂಡ ₹2 ಕೋಟಿ ಹಣ ಬಿಡುಗಡೆಯಾಗಿತ್ತು. ಈಗ ಅದನ್ನು ವಾಪಸ್ ಪಡೆಯಲಾಗಿದೆ. ಕೆಜಿಎಫ್ ಸೇರಿದಂತೆ ಕೋಲಾರ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಲು ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದವರೇ ಇಲ್ಲಿನ ವಿದ್ಯಾಮಾನಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಬಿಜಿಎಂಎಲ್ ಕಾರ್ಮಿಕರಿಗೆ ಮನೆ, ಅಮೃತ ಸಿಟಿ ಯೋಜನೆ ಜಾರಿ, ಚೆನ್ನೈ ಎಕ್ಸ್ಪ್ರೆಸ್ ಕಾರಿಡಾರ್ ನಿರ್ಮಾಣ, ನಗರದ ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಿದ್ದು, ಬಿಜೆಪಿ ಸರ್ಕಾರ. ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಕಾಮಗಾರಿಗಳು ಮುಂದುವರೆಯುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಅವರು ಬೆಳೆದ ಬೆಳೆಗಳಿಗೆ ಸಮರ್ಪಕ ನೀರು ಕೊಡಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.

ಮಾಜಿ ಶಾಸಕ ವೈ.ಸಂಪಂಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಸುರೇಶ್, ಗ್ರಾಮಾಂತರ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.