ಕೆಜಿಎಫ್ (ಕೋಲಾರ): ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಗೆ ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅವರು ರಾಬರ್ಟಸನ್ಪೇಟೆಯ ಕುವೆಂಪು ಬಸ್ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಚಲಾಯಿಸಿ ಗಮನ ಸೆಳೆದರು. ಅವರಿಗೆ ಬಸ್ಸಿನ ಚಾಲಕ ನೆರವಾದರು.

ಕಾರ್ಯಕರ್ತರ ಒತ್ತಾಯದ ಮೇರೆಗೆ ಮತ್ತೊಂದು ಬಸ್ ಚಲಾಯಿಸಿದರು. ಎರಡು ಬಾರಿ ಗೇರ್ ಸರಿಯಾಗಿ ಬೀಳದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿತು. ಸ್ವಲ್ಪದರಲ್ಲಿಯೇ ಹಿಂಭಾಗದಲ್ಲಿದ್ದ ಖಾಸಗಿ ಬಸ್ಗೆ ಡಿಕ್ಕಿಯಾಗುವುದು ತಪ್ಪಿತು. ಕಾಂಗ್ರೆಸ್ ಕಾರ್ಯಕರ್ತರು ಜಯಕಾರ ಕೂಗಿದರು.

ನಂತರ ಶಾಸಕಿ ಬಸ್ನಲ್ಲಿ ಕುಳಿತು ಸ್ವಲ್ಪ ದೂರ ಪ್ರಯಾಣ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.