ಕೆಜಿಎಫ್: ನಗರ ಹೊರಭಾಗದಲ್ಲಿ ವರ್ತುಲ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಕೃಷ್ಣಾವರಂ, ಸುಂದರಪಾಳ್ಯ ಒಳಗೊಂಡಂತೆ ರಸ್ತೆಯನ್ನು ನಿರ್ಮಾಣ ಮಾಡಲು ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆಯಾಗಬೇಕಾಗಿದೆ ಎಂದು ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಧರ್ಮೇಂದ್ರ ಹೇಳಿದರು.

ಪ್ರಾಧಿಕಾರದಲ್ಲಿ ಬುಧವಾರ ನಡೆದ ಸಭೆಯ ನಂತರ ಮಾತನಾಡಿದ ಅವರು, ಮೊದಲು ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ ಮಾಡುವ ಸಂಬಂಧ ಯೋಜನೆ ರೂಪಿಸಲಾಗಿತ್ತು. ಅದಕ್ಕೆ ಬಂಗಾರಪೇಟೆ ತಾಲ್ಲೂಕಿನ ಭಾಗಗಳು ಕೂಡ ಸೇರ್ಪಡೆಯಾಗಿತ್ತು. ಈಗ ಬಂಗಾರಪೇಟೆ ತಾಲ್ಲೂಕಿಗೆ ಪ್ರತ್ಯೇಕ ಪ್ರಾಧಿಕಾರ ಇರುವುದರಿಂದ ಅದನ್ನು ಕೈಬಿಟ್ಟು ತಾಲ್ಲೂಕಿಗೆ ಸಂಬಂಧಿಸಿದ ಯೋಜನೆ ರೂಪಿಸಲಾಗುವುದು. ಯೋಜನೆಗೆ ಅವಶ್ಯಕತೆ ಇರುವಷ್ಟು ಹಣ ಪ್ರಾಧಿಕಾರದಲ್ಲಿ ಇಲ್ಲ. ಶಾಸಕಿ ಸರ್ಕಾರದ ಮೇಲೆ ಒತ್ತಡ ಹೇರಿ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಇಂಟಿಗ್ರೇಟೆಡ್ ಟೌನ್ಶಿಪ್ ಮತ್ತು ಕೆಐಎಡಿಬಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕೈಗಾರಿಕಾ ಪ್ರಾಂಗಣಗಳ ಅಭಿವೃದ್ಧಿಗೆ ರಿಂಗ್ ರೋಡ್ ಅವಶ್ಯಕತೆ ಇದೆ. ಆದರೆ, ಪ್ರಾಧಿಕಾರಕ್ಕೆ ಆದಾಯದ ಕೊರತೆ ಇದೆ. ಪ್ರಾಧಿಕಾರದ ನೂತನ ಕಟ್ಟಡ ನಿರ್ಮಾಣಕ್ಕೆ ಜಾಗ ಸಿದ್ಧವಾಗಿದೆ. ಅದಕ್ಕೆ ಐದು ಕೋಟಿ ಅನುದಾನದ ಅವಶ್ಯಕತೆ ಇದೆ. ಸರ್ಕಾರಿ ಸಂಸ್ಥೆಯಿಂದ ಸಾಲ ಪಡೆಯುವ ಯೋಜನೆ ಇದೆ ಎಂದು ತಿಳಿಸಿದರು.

ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣವನ್ನು ಚುರುಕುಗೊಳಿಸಲು ಸರ್ಕಾರ ಮೊದಲ ಹಂತದಲ್ಲಿ ₹20 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ಕಾಂಪೌಂಡ್ ನಿರ್ಮಾಣ ಮಾಡಲಾಗುವುದು. ಟೌನ್ಶಿಪ್ಗೆ ಹೋಗಲು ಸೂಕ್ತ ದಾರಿಯ ಅವಶ್ಯಕತೆ ಇದೆ. ಅದಕ್ಕಾಗಿ ಮೂರು ಎಕರೆ ಜಮೀನು ಖರೀದಿ ಮಾಡಲು ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.

ಪ್ರಾಧಿಕಾರದ ಅಧ್ಯಕ್ಷ ಬಿ.ಶ್ರೀನಿವಾಸನ್, ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-18-1352064665

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.