ಕೆಜಿಎಫ್: ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತುರ್ತುಪರಿಸ್ಥಿತಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಮತ್ತು ಚಿಕಿತ್ಸೆ ಪಡೆದುಕೊಳ್ಳುವುದರ ಬಗ್ಗೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ವೈದ್ಯರಿಂದ ಮಂಗಳವಾರ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಎಲ್ಲರ ಪ್ರಮುಖ ಆದ್ಯತೆ. ಉತ್ತಮ ಆರೋಗ್ಯ ಹೊಂದಿದ್ದರೆ, ಸಮರ್ಪಕ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ತಾವು ಮತ್ತು ತಮ್ಮ ಕುಟುಂಬದವರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಕುಮಾರ್, ಶಸ್ತ್ರ ಚಿಕಿತ್ಸಕ ಡಾ.ಗೌತಮ ಮತ್ತು ಡಾ.ಗಣೇಶ್ ಅವರು ತುರ್ತು ಸಂದರ್ಭದಲ್ಲಿ ಸ್ವಯಂ ಆಗಿ ಚಿಕಿತ್ಸೆ ಪಡೆಯುವ ವಿಧಾನಗಳ ಬಗ್ಗೆ ವಿವರಣೆ ನೀಡಿದರು. ನಾಯಿ, ಹಾವು ಕಡಿದಾಗ, ಅಕಸ್ಮಿಕವಾಗಿ ಬೆಂಕಿ ತಾಗಿದಾಗ, ಹೃದಾಯಾಘಾತ, ತಲೆಗಾಯ ಮತ್ತು ನೀರಿನಲ್ಲಿ ಮುಳುಗಿದಾಗ ಕೈಗೊಳ್ಳಬೇಕಾದ ಸಿಪಿಆರ್ ಮುಂತಾದ ವಿಧಾನಗಳ ಬಗ್ಗೆ ತರಬೇತಿ ನೀಡಿದರು.

ಡಿವೈಎಸ್ಪಿ ಲಕ್ಷ್ಮಯ್ಯ ಸೇರಿದಂತೆ ಜಿಲ್ಲೆಯ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-734393673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.