ಕೆಜಿಎಫ್: ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರೊಂದಿಗೆ ಪೊಲೀಸರು ಇದ್ದಾರೆ ಎಂಬ ಸಂದೇಶವನ್ನು ಸಾರಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರ ನೇತೃತ್ವದಲ್ಲಿ ನೂರಾರು ಪೊಲೀಸರು ಆಂಡರಸನ್ಪೇಟೆಯಲ್ಲಿ ಬುಧವಾರ ರಾತ್ರಿ ಪಥ ಸಂಚಲನ ನಡೆಸಿದರು.

ಆಂಡರಸನ್ ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇತ್ತೀಚಿಗೆ ಹಲವು ರೌಡಿಗಳನ್ನು ಗಡಿಪಾರು ಮಾಡಲಾಗಿತ್ತು. ಕೆಲವರನ್ನು ಜೈಲಿಗೆ ಕಳಿಸಲಾಗಿತ್ತು. ಕೆಲ ರೌಡಿಗಳ ವರ್ತನೆಯಿಂದ ಬಡಾವಣೆಯ ವರ್ತಕರು ಭೀತಿಗೊಂಡಿದ್ದರು. ಈ ಹಿನ್ನೆಲೆ ಜನರಲ್ಲಿ ಧೈರ್ಯ ತುಂಬಲು ಪೊಲೀಸರು ಬಡಾವಣೆಯ ಗಲ್ಲಿಗಲ್ಲಿಗಳಲ್ಲಿ ಸಂಚರಿಸಿದರು.

ಕೆಜಿಎಫ್ ನಗರವನ್ನು ರೌಡಿ ಮುಕ್ತವನ್ನಾಗಿ ಮಾಡಲು ಪಣತೊಡಲಾಗಿದೆ. ರೌಡಿ ಚಟುವಟಿಕೆ ನಡೆಸುತ್ತಿದ್ದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ರೌಡಿಗಳು ಮತ್ತಿತರರ ಸಮಾಜಘಾತುಕ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಪೊಲೀಸರಿಗೆ ಸಹಕಾರ ನೀಡಬೇಕು. ಅನುಮಾನಾಸ್ಪದ ಚಟುವಟಿಕೆಗಳು ಮತ್ತು ಕಾನೂನು ಬಾಹಿರಕೃತ್ಯಗಳು ನಡೆದರೆ, ಪೊಲೀಸರಿಗೆ ಮಾಹಿತಿ ನೀಡಬೇಕು. ಅವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್ಪಿ ಶಿವಾಂಶು ರಜಪೂತ್ ಹೇಳಿದರು.

ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ಕುಮಾರ್ ಸೇರಿದಂತೆ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-1557318545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.