ಕೆಜಿಎಫ್: ನಗರದ ವಿವಿಧ ಪ್ರದೇಶಗಳಲ್ಲಿರುವ ರೌಡಿ ಪಟ್ಟಿಯಲ್ಲಿರುವವರ ಮನೆಗೆ ಪೊಲೀಸ್ ತಂಡವು ಭಾನುವಾರ ಮುಂಜಾನೆ ದಾಳಿ ನಡೆಸಿ, ಮಾರಕಾಸ್ತ್ರಗಳ ಬಗ್ಗೆ ತಪಾಸಣೆ ನಡೆಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮತ್ತು ಡಿವೈಎಸ್ಪಿ ಲಕ್ಷ್ಮಯ್ಯ ನೇತೃತ್ವದಲ್ಲಿ ತಂಡಗಳು ಪ್ರತ್ಯೇಕವಾಗಿ ವಿವಿಧ ಬಡಾವಣೆಗಳಲ್ಲಿರುವ ರೌಡಿಗಳ ನಿವಾಸದ ಮೇಲೆ ಮುಂಜಾನೆ ದಾಳಿ ನಡೆಸಿದರು. ಮನೆಯಲ್ಲಿ ಮಾರಕಾಸ್ತ್ರಗಳ ಬಗ್ಗೆ ಶೋಧ ನಡೆಸಿ, ರೌಡಿಗಳು ಮತ್ತು ಕುಟುಂಬದವರನ್ನು ವಿಚಾರಣೆ ನಡೆಸಿದರು.

ದಾಳಿ ಸಮಯದಲ್ಲಿ ರೌಡಿ ಜಯಕಾಂತ್ ಮನೆಯಲ್ಲಿ ಎರಡು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮತ್ತೊಬ್ಬ ರೌಡಿ ಶರತ್ಕುಮಾರ್ ಮನೆಯಲ್ಲಿ ಸಹ ಒಂದು ಮಾರಕಾಸ್ತ್ರ ದೊರೆತಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಿದರು. ನಂತರ ಇಬ್ಬರನ್ನೂ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ನಿರ್ದಾಕ್ಷಿಣ್ಯವಾಗಿ ನಿಗ್ರಹ ಮಾಡಲಾಗುತ್ತದೆ. ಗಡಿಪಾರು ಸಹಿತ ಇತರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ರೌಡಿ ಚಟುವಟಿಕೆ ಬಿಟ್ಟು, ಸಭ್ಯ ಜೀವನ ನಡೆಸಬೇಕು. ಕುಟುಂಬದವರು ಸಹ ರೌಡಿ ಚಟುವಟಿಕಗಳಿಗೆ ಪ್ರೋತ್ಸಾಹ ನೀಡಬಾರದು ಎಂದು ಎಸ್ಪಿ ಶಿವಾಂಶು ರಜಪೂತ್ ಎಚ್ಚರಿಕೆ ನೀಡಿದರು.

ರಾಬರ್ಟಸನ್ಪೇಟೆ, ಊರಿಗಾಂ ಮತ್ತು ಆಂಡರಸನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಐವರು ಪೊಲೀಸ್ ಇನ್ಸ್ಪೆಕ್ಟರ್ ಹತ್ತು ಸಬ್ ಇನ್ಸ್ಪೆಕ್ಟರ್ ಮತ್ತು ಅರವತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಪ್ರತಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪ್ರತ್ಯೇಕ ತಂಡವನ್ನು ರಚಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-18-762942786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.