ಕೆಜಿಎಫ್: ನಗರ ಹೊರವಲಯದ ಬಾಣಗೆರೆ ಕಲ್ಲು ಕ್ವಾರಿ ಶುಕ್ರವಾರ ಸ್ಫೋಟಗೊಂಡು ತಮಿಳುನಾಡು ಮೂಲದ ಮೂವರು ತೀವ್ರ ಗಾಯಗೊಂಡಿದ್ದಾರೆ.

ಮಾರಿ (60), ಗೋವಿಂದಪ್ಪ (60) ಮತ್ತು ಮುನಿಯಪ್ಪ (59) ಸ್ಫೋಟದಲ್ಲಿ ತೀವ್ರ ಗಾಯಗೊಂಡಿದ್ದಾರೆ. ಅವರಿಗೆ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಸೇರಿಸಲಾಗಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಕಲ್ಲು ಬಂಡೆಗೆ ತೂತು ಮಾಡಿ, ಅದಕ್ಕೆ ಮದ್ದನ್ನು ಇಡಲಾಗುತ್ತಿತ್ತು. ಈ ಸಮಯದಲ್ಲಿ ಮದ್ದು ಸರಿಯಾಗಿ ಕಲ್ಲಿನೊಳಗೆ ಹೋಗದೆ, ಮೇಲ್ಭಾಗದಲ್ಲಿಯೇ ಇತ್ತು. ಬೆಂಕಿ ಇಟ್ಟ ತಕ್ಷಣ ಮದ್ದು ಮೇಲ್ಮುಖವಾಗಿ ಹಾರಿ ಸಮೀಪದಲ್ಲಿಯೇ ಇದ್ದ ಮೂವರಿಗೆ ಗಾಯಗಳಾಗಿವೆ. ಮೂವರ ಪೈಕಿ ಮಾರಿ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಏಳೆಂಟು ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಗಾಯಗೊಂಡವರೆಲ್ಲರೂ ತಮಿಳುನಾಡಿನ ಧರ್ಮಪುರಿ ಜಿಲ್ಲೆಯವರು. ಸುಮಾರು ಎರಡು ತಿಂಗಳಿಂದ ಈ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗಣಿಗಾರಿಕೆಯನ್ನು ಆರ್.ಆರ್.ಸ್ಟೋನ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆ ನಡೆಸುತ್ತಿತ್ತು. ಕಟ್ಟಡ ನಿರ್ಮಾಣಕ್ಕೆ ಉಪಯೋಗಿಸುವ ಕಲ್ಲನ್ನು ಗಣಿಗಾರಿಕೆ ಮಾಡುತ್ತಿದ್ದು, 2024ರ ಡಿಸಂಬರ್ನಲ್ಲಿ ಇಲಾಖೆಯಿಂದ ಅನುಮತಿ ಪಡೆದಿತ್ತು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮತ್ತು ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಸ್ಫೋಟದ ಬಗ್ಗೆ ನಿಖರ ವರದಿ ನೀಡಲು ತಜ್ಞರ ವರದಿಗೆ ಕಾಯಲಾಗುತ್ತಿದೆ. ತಜ್ಞರ ವರದಿಯನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಂಡರಸನ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಂದಾಯ ಅಧಿಕಾರಿಗಳು ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

ಕ್ವಾರಿಯವರು ಅನುಮತಿ ಪತ್ರ ತೋರಿಸಿದ್ದಾರೆ. ಆದರ ಸಾಚಾತನ ಮತ್ತು ಇತರ ಮಾಹಿತಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳಿಂದ ಪಡೆದುಕೊಳ್ಳಲಾಗುವುದು.
ಶಿವಾಂಶು ರಜಪೂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.