ಕೆಜಿಎಫ್: ಮಳೆ ಬಂದರೆ ರಾಜಕಾಲುವೆ ಉಕ್ಕಿ ಬಡಾವಣೆಗಳಿಗೆ ಹರಿಯುವ ನೀರಿಗೆ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ರಾಜಕಾಲುವೆ ನೀರು ರಸ್ತೆಗೆ ನುಗ್ಗಬಾರದು ಎಂದು ಶಾಸಕಿ ಎಂ.ರೂಪಕಲಾ ತಾಕೀತು ಮಾಡಿದರು.

ನಗರದಲ್ಲಿ ಶುಕ್ರವಾರ ಊರಿಗಾಂ ಪೇಟೆಯ ರಾಜಕಾಲುವೆ ಪ್ರದೇಶಕ್ಕೆ ಭೇಟಿ ನೀಡಿದ ಅವರು, ರಾಜಕಾಲುವೆಯಲ್ಲಿ ತುಂಬಿದ್ದ ಕೆಸರು ತೆಗೆಯುವ ಕಾಮಗಾರಿ ವೀಕ್ಷಿಸಿದರು. ರಾಜಕಾಲುವೆಯನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಅನಿರೀಕ್ಷಿತವಾಗಿ ಮಳೆ ಬಿದ್ದರೆ, ಮಳೆ ನೀರು ರಸ್ತೆಗೆ ಬಂದು ಮನೆಗಳಿಗೆ ನುಗ್ಗಬಾರದು. ಸಾರ್ವಜನಿಕರು ಸಹ ರಾಜಕಾಲುವೆಗೆ ಕಸ ಕಡ್ಡಿಗಳನ್ನು ಹಾಕಬಾರದು. ಈ ನಿಟ್ಟಿನಲ್ಲಿ ಅವರಿಗೆ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಂ.ಜಿ.ಮಾರುಕಟ್ಟೆ ಬಳಿ ಇರುವ ಹುಲ್ಲು ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಉದ್ದೇಶಿತ ಮಾರುಕಟ್ಟೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದರು. ಮೊದಲು ಇದ್ದ ಹುಲ್ಲು ಮಾರುಕಟ್ಟೆ ಪ್ರದೇಶದಲ್ಲಿ ಮೂರು ಅಂತಸ್ತಿನ ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗುವುದು. ಬೃಹತ್ ವಾಣಿಜ್ಯ ಸಂಕೀರ್ಣದಲ್ಲಿ ವರ್ತಕರಿಗೆ, ಗ್ರಾಹಕರಿಗೆ ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ವಾಣಿಜ್ಯ ಸಂಕೀರ್ಣವನ್ನು ವಿನ್ಯಾಸಗೊಳಿಸಲಾಗಿದೆ. ನಗರದ ಜನ ಮಾರುಕಟ್ಟೆ ಸಂಕೀರ್ಣದ ಬಗ್ಗೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಮಗಾರಿ ವಿಳಂಬ ಇಲ್ಲದೆ ನಡೆದರೆ, ಈ ಭಾಗದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.

ನಗರಸಭೆ ಆಯುಕ್ತ ಶ್ರೀಧರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪೂರ್ಣಿಮಾ, ಕಿರಣ್ಕುಮಾರ್, ಎಂ.ಜಿ.ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ಮೋಹನ್ ರಾಜ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-158419004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.