ಕೆಜಿಎಫ್: ರಾಬರ್ಟಸನ್ಪೇಟೆಯಲ್ಲಿ ಶುಕ್ರವಾರ ಸಂಜೆ ರೌಡಿಗಳು ಮಾರಕಾಸ್ತ್ರದಿಂದ ಹೊಡೆದಾಡಿಕೊಂಡ ಪರಿಣಾಮ ರೌಡಿ ಬರ್ನಾಡ್ ಎಂಬಾತನಿಗೆ ತೀವ್ರ ಗಾಯಗಳಾಗಿವೆ.

ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಸಂಜೆ ರೌಡಿ ಬರ್ನಾಡ್ ಮೇಲೆ ಇತರ ರೌಡಿ ಶೀಟರ್ ಗಳಾದ ಸಚಿತ್ ಆಲಿಯಾಸ್ ಟಿಪಿಕ್ ಮತ್ತು ಅಭಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದರು. ಈ ಸಂದರ್ಭದಲ್ಲಿ ಪರಸ್ಪರ ಹೊಡೆದಾಟ ನಡೆದಿದೆ. ನಂತರ ಬರ್ನಾಡ್ ತಲೆ ಮತ್ತು ದೇಹದ ಇತರ ಭಾಗಗಳಿಗ ತೀವ್ರ ಗಾಯಗಳಾಗಿವೆ. ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಕೋಲಾರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸಲಾಗಿದೆ. ಹಲ್ಲೆ ನಡೆಸಿದ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ರಾಬರ್ಟಸನ್ಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.