ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೂರು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Last Updated 16 ಜುಲೈ 2021, 3:56 IST
ಅಕ್ಷರ ಗಾತ್ರ

ಮಾಲೂರು: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಸರ್ಕಾರ ಅವರನ್ನು ಗುರ್ತಿಸಿ ದಿನಸಿ ಕಿಟ್ ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ಪಟ್ಟಣದಲ್ಲಿ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ಮಂಡಳಿಯಿಂದ ಗುರುವಾರ ಆಯೋಜಿಸಿದ್ದ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಸುಮಾರು 16 ಸಾವಿರ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಇಲಾಖೆಯಲ್ಲಿ ನೋಂದಣಿಯಾಗಿದ್ದಾರೆ. ಸರ್ಕಾರ ಕೇವಲ 2 ಸಾವಿರ ದಿನಸಿ ಕಿಟ್‌‌ ನೀಡಿ ಹಂಚುವ ಜವಾಬ್ದಾರಿಯನ್ನು ನನಗೆ ನೀಡಿತ್ತು. ಆದರೆ, ಸರ್ಕಾರದ ಮೇಲೆ ಒತ್ತಡ ಹಾಕಿದ್ದರಿಂದ ಮತ್ತೆ 2 ಸಾವಿರ ಕಿಟ್ ನೀಡಿದ್ದಾರೆ ಎಂದರು.

ಹಲವಾರು ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಪಟ್ಟಿ ನೀಡಿದ್ದಾರೆ. ಅದರಲ್ಲಿ ಕೆಲವರನ್ನು ಆಯ್ಕೆ ಮಾಡಿ ದಿನಸಿ ಕಿಟ್ ನೀಡಲಾಗುತ್ತಿದೆ. ಕಾರ್ಮಿಕರು ಯಾವುದೇ ಕಾರಣಕ್ಕೂ ಬೇಸರಪಡಬಾರದು. ಮುಂದಿನ ದಿನಗಳಲ್ಲಿ ದಿನಸಿ ಕಿಟ್ ವಂಚಿತರನ್ನು ಗುರ್ತಿಸಿ ಕಿಟ್ ವಿತರಿಸಲಾಗುವುದು ಎಂದು ತಿಳಿಸಿದರು.

ಕಾರ್ಮಿಕರಿಗೆ ₹ 3 ಸಾವಿರ ಪರಿಹಾರ ಧನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಈ ಹಣ ಕೆಲವರ ಬ್ಯಾಂಕ್ ಖಾತೆಗಳಿಗೆ ಮಾತ್ರ ಪಾವತಿಯಾಗಿದೆ. ಉಳಿದವರಿಗೆ ಇನ್ನೂ ಪಾವತಿಯಾಗಿಲ್ಲ. ಅಧಿಕಾರಿಗಳು ಎಲ್ಲಾ ಕಾರ್ಮಿಕರಿಗೂ ಸರ್ಕಾರದ ಹಣ ತಲುಪವಂತೆ ಮಾಡಬೇಕು ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಮುರಳೀಧರ್, ಮಾಜಿ ಉಪಾಧ್ಯಕ್ಷ ವೆಂಕಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನದೀಮ್, ಕಾರ್ಮಿಕ ಇಲಾಖೆಯ ಮಂಜುನಾಥ್, ಮಾರುತಿ ಮರ ಕೆಲಸಗಾರರ ಸಂಘದ ಅಧ್ಯಕ್ಷ ಮಾವೆ ಪ್ರಕಾಶ್, ರವಿಚಂದ್ರ, ಕೆ. ವೇಣು, ಕೊಪ್ಪ ಚಂದ್ರು, ಮುನಿಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT