‘ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ವಿರುದ್ಧ ಪ್ರಕರಣ ದಾಖಲಿಸಿ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರದ ಸದುದ್ದೇಶವನ್ನು ಗೌರವಿಸಬೇಕೆಂದು ಹಾಗೂ ವಸತಿ ಶಾಲೆಯ ಜಮೀನು ಉಳಿಸುವಂತೆ ಮೂರು ತಿಂಗಳ ಹಿಂದೆಯೇ ಒತ್ತಾಯಿಸಿದ್ದೆ. ಆದರೆ ತಾವು ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ಧೋರಣೆ ಮೂಲಕ ಬಡ ರೈತರ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆತಾತ್ಸರ ಮಾಡುತ್ತಿರುವುದು ಗೋಚರಿಸುತ್ತದೆ. ಇದು ನಿಮ್ಮ ಬೇಜವಾಬ್ದಾರಿ ಎಂದು ಏಕೆ ಪರಿಗಣಿಸಬಾರದು?’ ಎಂದು ಪತ್ರದಲ್ಲಿ ಉಪ ವಿಭಾಗಾಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಈಗ ಅಂಬೇಡ್ಕರ್ ವಸತಿ ಶಾಲೆ ಮಂಜೂರಾಗಿದೆ. ಕೂಡಲೇ ಕ್ರಮ ವಹಿಸಬೇಕು. ಆರೋಪಿಗಳ ರಕ್ಷಿಸುತ್ತಿರುವ ಹಾಗೂ ಬಡವರ ದಲಿತರ ಮಕ್ಕಳ ವಿದ್ಯಾರ್ಥಿಗಳಿಗೆ ಮಂಜೂರಾಗಿದ್ದ ಭೂಮಿ ಕಬಳಿಸಿರುವವರ ಪರವಾಗಿರುವ ತಮ್ಮನ್ನು ದೋಷಾರೋಪಿಯಾಗಿ ಮಾಡಿ ತಮ್ಮ ಮೇಲೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು’ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.