ಶನಿವಾರ, ಮೇ 28, 2022
27 °C

ಕೋಚಿಮುಲ್ ಚುನಾವಣೆ: ಮೇ.13ರಂದು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಓಮವಾರ (ಮೇ.13) ನಡೆಯಲಿರುವ ಚುನಾವಣೆಯಲ್ಲಿ 21 ಮಂದಿ ಕಣದಲ್ಲಿದ್ದು, ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಮತದಾನ ನಡೆಯಲಿದೆ.

13 ಮಂದಿ ನಿರ್ದೇಶಕರ ಪೈಕಿ 4 ಮಂದಿ ಅವಿರೋಧಿವಾಗಿ ಆಯ್ಕೆಯಾಗಿದ್ದು, ಬಂಗಾರಪೇಟೆ ಜಯಸಿಂಹ ಕೃಷ್ಣಪ್ಪ, ಗೌರಿಬಿದನೂರು ಕಾಂತರಾಜ್, ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದ ಸುನಂದಮ್ಮ, ಬಾಗೇಪಲ್ಲಿ ಅಶ್ವಥ್ಥರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದು, 9 ಸ್ಥಾನಗಳಿಗೆ ಮಾತ್ರ ಚುನಾವಣೆಯ ನಡೆಯುತ್ತಿದ್ದು, 1,200 ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಕೋಲಾರ ಜಿಲ್ಲೆಯ 5 ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಿದ್ದಾಜಿದ್ದಿನ ಪೈಪೋಟಿಯ ನಡುವೆ ಹಣ, ಉಡುಗೊರೆಗಳು, ಬೈಕ್ ಮತ್ತಿತರ ಆಮಿಷಗಳನ್ನು ಮತದಾರರಿಗೆ ಒಡ್ಡಲಾಗಿದೆ ಎಂಬ ವ್ಯಾಪಕವಾಗಿ ಕೇಳಿ ಬರುತ್ತಿವೆ.

9 ಕ್ಷೇತ್ರಗಳ ಮತದಾನಕ್ಕಾಗಿ ಹಾರೋಹಳ್ಳಿ ಜಯನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ 9 ಕೊಠಡಿಗಳನ್ನು ಆಯ್ಕೆ ಮಾಡಲಾಗಿದ್ದು, ಮತದಾರರಿಗೆ ಹೊರತುಪಡಿಸಿ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಲೇಜಿನ ಸುತ್ತ ಸುಮಾರು 200 ಮೀ.ದೂರದಲ್ಲಿ ವಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈಗಾಗಲೇ ಆಯಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಿಗೆ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದ್ದು, ಅವರಿಗೆ ಮಾತ್ರ ಮತದಾನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದ್ದು, ಮತದಾನ ಮುಗಿದ ನಂತರ ಸಂಜೆ 4ಕ್ಕೆ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಫಲಿತಾಂಶ ಚುನಾವಣಾಧಿಕಾರಿ ಸೋಮಶೇಖರ್ ಪ್ರಕಟಿಸುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು