ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌: 53 ಕೆಜಿ ಗಾಂಜಾ ನಾಶ

Published 9 ಫೆಬ್ರುವರಿ 2024, 15:31 IST
Last Updated 9 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ

ಕೆಜಿಎಫ್‌: ಜಿಲ್ಲೆಯಲ್ಲಿ ಪೊಲೀಸರು ವಶಪಡಿಸಿಕೊಂಡ ಗಾಂಜಾವನ್ನು ದಾಬಸ್‌ಪೇಟೆ ಬಳಿಯ ಸೋಂಪುರ ಕೈಗಾರಿಕಾ ಪ್ರಾಂಗಣದ ಕೈಗಾರಿಕೆಯೊಂದರಲ್ಲಿ ಶುಕ್ರವಾರ ವೈಜ್ಞಾನಿಕವಾಗಿ ನಾಶ ಪಡಿಸಲಾಯಿತು.

ಕೆಜಿಎಫ್‌ ಪೊಲೀಸ್ ಜಿಲ್ಲೆಯಲ್ಲಿ ₹29,65,880 ಮೌಲ್ಯದ 53 ಕೆಜಿ ಗಾಂಜಾವನ್ನು 27 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಅವುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ನಾಶಪಡಿಸಿದರು.

ರಾಬರ್ಟಸನ್‌ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್ ರಾಮಕೃಷ್ಣಯ್ಯ, ಡಿಸಿಆರ್‌ಬಿ ಇನ್‌ಸ್ಪೆಕ್ಟರ್ ಮಂಜುನಾಥ ಲಿಂಗಾರೆಡ್ಡಿ ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT