ಕೋಲಾರ: ತಡೆಗೋಡೆ ಹಾಗೂ ಸರಿಯಾದ ಸೂಚನಾ ಫಲಕವಿಲ್ಲದೆ ಮುದುವಾಡಿ ಕೆರೆಗೆ ಕಾರು ಬಿದ್ದು ಸಂಭವಿಸಿದ ಅಪಘಾತದಲ್ಲಿ ಮೃತರಾದ ಸಿಪಿಎಂ ಹಾಗೂ ರೈತ ಮುಖಂಡ ಟಿ.ಎಂ.ವೆಂಕಟೇಶ್ ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಿಕೊಡುವಂತೆ ಕುಟುಂಬದವರು ಗುರುವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರಿಗೆ ಮನವಿ ಮಾಡಿದರು,

ಪತ್ನಿ ಮುನಿರತ್ನಮ್ಮ ಮಾತನಾಡಿ, ‘ತಾಲ್ಲೂಕಿನ ವ್ಯಾಪ್ತಿಯ ಈ ರಸ್ತೆಯು ರಾಜ್ಯ ಹೆದ್ದಾರಿಯಾಗಿದ್ದು, ರಸ್ತೆ ವಿಸ್ತೀರ್ಣ ಮಾಡಿಲ್ಲ. ಕೆರೆಗೆ ತಡೆಗೋಡೆಯನ್ನೂ ನಿರ್ಮಿಸಿಲ್ಲ. ಹೆಚ್ಚು ವಾಹನಗಳು ಸಂಚಾರವಿರುವ ರಸ್ತೆಯಾಗಿದ್ದು, ಈ ಭಾಗದಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪದ ವ್ಯವಸ್ಥೆಯೂ ಇಲ್ಲ. ಈ ಕಾರಣ ಅಪಘಾತ ನಡೆದ ಪತಿ ಮೃತಪಟ್ಟಿದ್ದಾರೆ’ ಎಂದರು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ. ದಯಮಾಡಿ ನನ್ನ ಪತಿಗೆ ಜಿಲ್ಲಾಡಳಿತದಿಂದ ಹಾಗೂ ರಾಜ್ಯ ಸರ್ಕಾರದಿಂದ ಮಾನವೀಯತೆ ದೃಷ್ಟಿಯಿಂದ ಪರಿಹಾರ ಕೊಡಿಸಿಕೊಡಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಜನವಾದಿ ಮಹಿಳಾ ಸಂಘಟನೆಯ ವಿ.ಗೀತಾ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲ್ಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ವೆಂಕಟೇಶ್ ಅವರ ಪುತ್ರ ಯಶವಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-1913284801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.