ಕೋಲಾರ: ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಬೆಟ್ಟದಲ್ಲಿ ಮಂಗಳವಾರ ಬಂಡೆ ಕಲ್ಲು ಒಡೆಯುವಾಗ ಸಿಡಿಮದ್ದು ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರ ಆರೋಗ್ಯವನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಬುಧವಾರ ವಿಚಾರಿಸಿದರು.

ನಗರ ಹೊರವಲಯದ ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ಕೊಪ್ಪಳ ಜಿಲ್ಲೆಯ ಚಿರಂಜೀವಿ (22), ರಾಮು (34), ಹೇಮಂತ (28) ಹಾಗೂ ರಾಜು (30) ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಕೈಕಾಲು, ಮುಖಕ್ಕೆ ಗಾಯವಾಗಿದೆ.

ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ ಇಲಾಖೆ ಹಾಗೂ ಇನ್ನಿತರ ಸಂಬಂಧಪಟ್ಟ ಇಲಾಖಾಧಿಕಾರಿಗಳು ಭೇಟಿ ನೀಡದೆ ಇರುವುದಕ್ಕೆ ರಾಮಪ್ಪ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಕದಿರೇನಹಳ್ಳಿ ಬೆಟ್ಟದಲ್ಲಿ ಕಾನೂನುಬಾಹಿರವಾಗಿ ಕಲ್ಲು ಬಂಡೆ ಒಡೆಯುತ್ತಿದ್ದು, ಅದಕ್ಕೆ ಕಾರ್ಮಿಕರನ್ನು ಬಳಸಿಕೊಳ್ಳಾಗುತ್ತಿದೆ. ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಕಾನೂನು ಪ್ರಕಾರ ಕಾರ್ಯನಿರ್ವಹಿಸುವ ಎಲ್ಲಾ ಅವಕಾಶವಿದ್ದರೂ, ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸಿರುವುದು ತಪ್ಪು ಎಂದರು.

ಯಾರೇ ತಪ್ಪಿತಸ್ಥರು ಇದ್ದರೂ ಶಿಕ್ಷೆಯಾಗಬೇಕು. ಈ ಕೂಡಲೇ ಗಣಿ ಇಲಾಖೆ ಅಧಿಕಾರಿಗಳು ಘಟನೆಯ ವರದಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು ಎಂದು ಸೂಚಿಸಿದರು.

ಕಲ್ಲು ಬಂಡೆಯ ಒಡೆಯುವ ಕಾರ್ಮಿಕರಿಗೆ ಯಾವುದೇ ವಿಮೆ, ಕಾರ್ಮಿಕ ಕಾರ್ಡ್ ಹಾಗೂ ಸೂಕ್ತ ರಕ್ಷಣೆ ಸಲಕರಣೆಗಳನ್ನು ನೀಡಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

ಗಣಿ ಇಲಾಖೆ ಅಧಿಕಾರಿಗಳು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುವಂತಾಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಈ ಘಟನೆಯ ಬಗ್ಗೆ ಚರ್ಚಿಸುತ್ತೇನೆ ಎಂದರು.

ಕೊಪ್ಪಳ ಮೂಲದ ಕಾರ್ಮಿಕರು ಬಂಡೆ ಕಲ್ಲು ಒಡೆಯುವ ಸಿಡಿಮದ್ದು ಸ್ಫೋಟಗೊಂಡು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಾಯದಿಂದ ಪಾರಾಗಿದ್ದು, ಗಾಯಗಳಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಅಭಿವೃದ್ಧಿ ನಿಗಮದಿಂದ ಸಂಬಂಧಪಟ್ಟವರಿಗೆ ಲಭ್ಯವಾಗುವ ಅನುಕೂಲವನ್ನು ಮಾಡಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎನ್.ವಿಜಯಲಕ್ಷ್ಮಿ, ಭೋವಿ ಸಮುದಾಯದ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎಸ್.ವಿ.ಲೋಕೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಕೋದಂಡರಾಮಯ್ಯ, ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ಭೋವಿ ಸಮುದಾಯದ ಯುವ ವೇದಿಕೆ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-1310169763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.