ಕೋಲಾರ: ಒಂದು ವಾರದೊಳಗೆ ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ಅಳವಡಿಸದಿದ್ದರೆ ಅಂತಹ ಹೊಂಡಗಳನ್ನು ಸರ್ಕಾರದಿಂದಲೇ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಕೃಷಿಕರ ಪಾಲಿಗೆ ವರದಾನವಾಗುವ ಬದಲು ಸಾವಿನ ಕೂಪಗಳಾಗಿ ಪರಿಣಮಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಜಿಲ್ಲೆಯ ಎಲ್ಲಾ ರೈತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಆಟವಾಡುವಾಗ ಅಥವಾ ಈಜಲು ಹೋಗಿ ಕೃಷಿ ಹೊಂಡಗಳಲ್ಲಿ ಮುಳುಗಿ ಮೃತಪಡುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ರೈತರ ಅಭಿವೃದ್ಧಿಗಾಗಿ ಸರ್ಕಾರ ಕೃಷಿ ಹೊಂಡ ನಿರ್ಮಿಸಿಕೊಡುತ್ತಿದೆ. ಆದರೆ, ಕನಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಮಾಯಕ ಮಕ್ಕಳ ಸಾವಿಗೆ ಕಾರಣವಾಗುವುದು ಅಕ್ಷಮ್ಯ ಅಪರಾಧ. ಕೃಷಿ ಹೊಂಡ ನಿರ್ಮಿಸಿದ ರೈತರು ಅದರ ಸುತ್ತ ಬೇಲಿ ಹಾಕುವುದು ಆದ್ಯ ಕರ್ತವ್ಯ ಎಂದಿದ್ದಾರೆ.

ಯಾವ ರೈತರು ಮುಂದಿನ 7 ದಿನಗಳ ಒಳಗಾಗಿ ತಮ್ಮ ಕೃಷಿ ಹೊಂಡಕ್ಕೆ ತಂತಿ ಬೇಲಿ ಅಥವಾ ರಕ್ಷಣಾ ಗೋಡೆ ನಿರ್ಮಿಸುವುದಿಲ್ಲವೋ, ಅಂತಹ ಹೊಂಡಗಳನ್ನು ಕೃಷಿ ಇಲಾಖೆಯ ಮೂಲಕ ಮುಲಾಜಿಲ್ಲದೆ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿ ಗ್ರಾಮ ಮಟ್ಟದಲ್ಲಿ ಕೃಷಿ ಅಧಿಕಾರಿಗಳು ಹೊಂಡಗಳ ಪರಿಶೀಲನೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕೂಡ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೇವಲ ಬೇಲಿ ಮಾತ್ರವಲ್ಲದೇ; ಹೊಂಡಕ್ಕೆ ಇಳಿಯದಂತೆ ಎಚ್ಚರಿಕೆ ಫಲಕಗಳನ್ನು ಹಾಕಬೇಕು. ಹೊಂಡದ ಪ್ಲಾಸ್ಟಿಕ್ ಶೀಟ್ ಜಾರುವಂತಿರುವುದರಿಂದ ಯಾರೂ ಅದರಲ್ಲಿ ಇಳಿಯದಂತೆ ಹೆಚ್ಚು ಜಾಗರೂಕತೆ ವಹಿಸಬೇಕು ಎಂದೂ ಹೇಳಿದ್ದಾರೆ.

ಜಿಲ್ಲಾಡಳಿತವು ಕೃಷಿ ಚಟುವಟಿಕೆಗಳಿಗೆ ಸರ್ವ ರೀತಿಯ ಸಹಕಾರ ನೀಡಲಿದೆ. ಆದರೆ ಸಾರ್ವಜನಿಕರ, ವಿಶೇಷವಾಗಿ ಮಕ್ಕಳ ಪ್ರಾಣದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಅಸುರಕ್ಷಿತ ಕೃಷಿ ಹೊಂಡಗಳ ಕುರಿತು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಕ್ರಮ ಎದುರಿಸಲು ಸಜ್ಜಾಗಬೇಕು ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-1708130150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.