ಕೆಜಿಎಫ್: ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿಗೆ ಸೇರಿದ ಆಲಿಕಲ್ಲು ಗ್ರಾಮದಲ್ಲಿ ವಸತಿ ಉದ್ದೇಶಕ್ಕಾಗಿ ಮಂಜೂರಾದ ನಿವೇಶನ ಮತ್ತು ನರೇಗಾ ಕಾಮಗಾರಿಗಳಲ್ಲಿ ಅಧಿಕಾರಿಗಳು ಅವ್ಯವಹಾರ ನಡೆಸಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರೋಪಿಸಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶಪ್ಪ ಅವರಿಗೆ ದೂರು ಸಲ್ಲಿಸಿದೆ.

ಬಸವ ವಸತಿ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ. ಬೇರೆಯವರ ನಿವೇಶನ ಮತ್ತು ಮನೆ ಕಾಮಗಾರಿ ತೋರಿಸಿ, ಜಿಪಿಎಸ್ ಮಾಡಿಸಿ ಹಣ ಪಡೆಯಲಾಗಿದೆ. ಹಿಂದೆ ಇದ್ದ ಮನೆಯನ್ನು ತೋರಿಸಿ, ಕಾಮಗಾರಿ ಪೂರ್ಣವಾಗಿದೆ ಎಂದು ಅನುದಾನ ಬಿಡುಗಡೆ ಮಾಡಲಾಗಿದೆ. ಇಂತಹ ಹಲವು ಪ್ರಕರಣಗಳು ನಡೆದಿದೆ. ಎಲ್ಲಾ ಪ್ರಕರಣಗಳನ್ನು ದಾಖಲೆ ಸಮೇತ ಪಂಚಾಯಿತಿ ಅಧಿಕಾರಿಗಳಿಗೆ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಫಲಾನುಭವಿಗಳು ಗ್ರಾಮಕ್ಕೆ ಸೇರದೇ ಇದ್ದರೂ, ಅವರನ್ನು ಕೂಡ ಫಲಾನುಭವಿಯನ್ನಾಗಿ ತೋರಿಸಲಾಗಿದೆ. ಹಾಗಾಗಿ ಈ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ನರೇಗಾ ಯೋಜನೆಯಲ್ಲಿ ಕೂಡ ಇಲ್ಲದ ವ್ಯಕ್ತಿಗಳ ಹೆಸರಿನಲ್ಲಿ ಎನ್ಆರ್ಎಂ ತೆಗೆದು ಹಣ ಡ್ರಾ ಮಾಡಲಾಗಿದೆ. ಅಂಗನವಾಡಿಯಲ್ಲಿ ಸಹಾಯಕಿ ಆಗಿ ಕೆಲಸ ಮಾಡುವ ಮಹಿಳೆಯನ್ನು ನರೇಗಾ ಯೋಜನೆಯಲ್ಲಿ ಕಾಮಗಾರಿ ನಡೆಸಿದ್ದಾರೆ ಎಂದು ತೋರಿಸಲಾಗಿದೆ. ಈ ಸಂಬಂಧ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗೆ ಸಹ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ ಎಂದು ಪಕ್ಷದ ಮುಖಂಡ ಪ್ರಕಾಶ್ ರೆಡ್ಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-18-1578528407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.