ಶ್ರೀನಿವಾಸಪುರ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಉದ್ವಿಗ್ನ ವಾತಾವರಣ ಉಂಟಾಯಿತು.

ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಗೆ ಹಾಜರಾಗಬೇಕಾದ ಅಧಿಕಾರಿಗಳು ಗೈರಾಗುವ ಮೂಲಕ ನಿರ್ಲಕ್ಷ್ಯತೆ ವಹಿಸಿದ್ದಾರೆ ಎಂದು ದಲಿತ ಮುಖಂಡ ತಿಮ್ಮರಾಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಪೂರ್ವಭಾವಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ಹಾಜರಾಗದೆ, ಬೇಜವಾಬ್ದಾರಿ ಪ್ರದರ್ಶಿಸುತ್ತದ್ದಾರೆ. ಪ್ರತಿ ವರ್ಷವೂ ಅಂಬೇಡ್ಕರ್ ಜಯಂತಿ ಪೂರ್ವಸಭೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯತೆ ವಹಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಮುಖಂಡರು ಆರೋಪಿಸಿದರು.

ಸಭೆಗಳನ್ನು ಕೇವಲ ರೂಪಕದಂತೆ ನಡೆಸಲಾಗುತ್ತಿದೆ. ಯಾವುದೇ ಸ್ಪಷ್ಟ ಯೋಜನೆಗಳಿಲ್ಲದೆ, ಕಾರ್ಯಕ್ರಮದ ಸಿದ್ಧತೆಗಳಲ್ಲಿ ಗೊಂದಲ ಉಂಟಾಗಿದೆ ಎಂದರು.

ಕಾರ್ಯಕ್ರಮಕ್ಕೆ ಅಗತ್ಯ ಮೂಲ ವ್ಯವಸ್ಥೆ, ವೇದಿಕೆ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಸೇರಿದಂತೆ ಹಲವು ಸೌಲಭ್ಯಗಳ ಬಗ್ಗೆ ಯಾವುದೇ ಸಮರ್ಪಕ ಯೋಜನೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಜಯಂತಿ ಸಮೀಪಿಸುತ್ತಿದ್ದರೂ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿಲ್ಲ ಎಂದು ದೂರಿದರು.

ತಹಶೀಲ್ದಾರ್ ಸುಧೀಂದ್ರ ಮಾತನಾಡಿ, ಅಂಬೇಡ್ಕರ್ ಜಯಂತಿಯನ್ನು ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಭೆಯಲ್ಲಿ ಇ.ಒ ಸರ್ವೇಶ್, ತಾಲ್ಲೂಕು ಇಲಾಖೆಯ ಅಧಿಕಾರಿಗಳು, ಉಪ್ಪರಪಲ್ಲಿ ತಿಮ್ಮರಾಯಪ್ಪ, ಚಲ್ದಿಗಾನಹಳ್ಳಿ ನರಸಿಂಹಯ್ಯ, ಕಲ್ಲೂರು ವೆಂಕಟೇಶ್, ಆವಲಕುಪ್ಪ ಹನುಮಂತಪ್ಪ, ಆರ್.ವಿ.ನರಸಿಂಹ, ರಾಮಂಜಮ್ಮ, ಹೆಬ್ಬಟ ಆನಂದ, ಗಾಡ್ಲಹಳ್ಳಿ ಚಲಪತಿ, ಶ್ರೀನಿವಾಸ, ಮುನಿವೆಂಕಟಪ್ಪ ಉಪಸ್ಥತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-18-1487623496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.