ಬಂಗಾರಪೇಟೆ: ಹೊಸಕೋಟೆಯಲ್ಲಿ 200 ಮೀಟರ್ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಆಗ್ರಹಿಸಿ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ರಿಪಬ್ಲಿಕನ್ ಸಂಘಟನೆ ರಾಜ್ಯಾಧ್ಯಕ್ಷ ಚಿಕ್ಕ ನಾರಾಯಣ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ರಿಪಬ್ಲಿಕನ್ ಸಂಘಟನೆಯ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹಕ್ಕು ಮತ್ತು ಮಹಾನ್ ನಾಯಕರ ಗೌರವಕ್ಕಾಗಿ ನಾವು ರಸ್ತೆಗಿಳಿಯುವುದು ಅನಿವಾರ್ಯವಾಗಿದೆ ಎಂದರು.

ಅಧಿಕಾರಿಗಳ ಅಸ್ಥಿರ ವರ್ಗಾವಣೆ ನೀತಿಯನ್ನು ಖಂಡಿಸಿದ ಅವರು, ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗದಿದ್ದರೆ ಬಂಗಾರಪೇಟೆಯಂತಹ ತಾಲ್ಲೂಕುಗಳ ಅಭಿವೃದ್ಧಿ ಕೇವಲ ಕಾಗದದ ಮೇಲಷ್ಟೇ ಉಳಿಯಲಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ, ದಕ್ಷ ಅಧಿಕಾರಿಗಳಿಗೆ ಕನಿಷ್ಠ 2 ವರ್ಷಗಳ ಕಾಲ ಒಂದೇ ಕಡೆ ಕೆಲಸ ಮಾಡಲು ಅವಕಾಶ ನೀಡಬೇಕು. ಆಗ ಮಾತ್ರ ಅವರು ಸ್ಥಳೀಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಶಾಶ್ವತ ಪರಿಹಾರ ನೀಡಲು ಸಾಧ್ಯ. ವರ್ಗಾವಣೆಗಳು ಕೇವಲ ಜನಪ್ರತಿನಿಧಿಗಳ ಶಿಫಾರಸಿನ ಮೇಲೆ ನಡೆಯದೆ, ಅರ್ಹತೆ ಮತ್ತು ಆಡಳಿತಾತ್ಮಕ ಆಧಾರದ ಮೇಲೆ ನಡೆಯಬೇಕು ಎಂದರು.

ಸಕ್ಕನಹಳ್ಳಿ ಮುನಿರಾಜು, ಚಿಂಟು ರಾಮಚಂದ್ರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260317-18-1216329666

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.