ಕೋಲಾರ: ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಡಗೈ(ಮಾದಿಗ) ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾದಿಗರ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಸಾಹುಕಾರ್ ಶಂಕರಪ್ಪ ಆರೋಪಿಸಿದ್ದಾರೆ.

ಈ ಕ್ರಮವನ್ನು ಖಂಡಿಸಿರುವ ಅವರು ಅಗತ್ಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ಕಾರ್ಯಕ್ರಮದ ಹಿಂದಿನ ದಿನ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿದ್ದಾರೆ. ಆದರೆ, ಮಾದಿಗ ಸಮುದಾಯವರಿಗೆ ಕನಿಷ್ಠ ವೇದಿಕೆ ಏರಲು ಅವಕಾಶ ನೀಡದೆ ಅವಮಾನ ಮಾಡಿದ್ದಾರೆ. ಬಲಗೈ ಸಮುದಾಯದವರನ್ನು ಮಾತ್ರ ವೇದಿಕೆಗೆ ಕರೆದು ಏಕಪಕ್ಷೀಯವಾಗಿ ನಡೆದುಕೊಳ್ಳಲಾಗಿದೆ ಎಂದು ದೂರಿದ್ದಾರೆ.

ರಾಜ್ಯದಾದ್ಯಂತ ಮೀಸಲಾತಿ - ಒಳ ಮೀಸಲಾತಿ ಹೋರಾಟ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವಾಗ ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯವನ್ನು ಕಡೆಗಣಿಸಿರುವುದು ಎಷ್ಟರ ಮಟ್ಟಿಗೆ ಸರಿ? ಏಕಪಕ್ಷಿಯವಾಗಿ ಕಾರ್ಯಕ್ರಮ ರೂಪಿಸಿ ಯಾರನ್ನು ಮೆಚ್ಚಿಸಲು ಮುಂದಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಎಂ.ಶ್ರೀನಿವಾಸನ್ ಅವರನ್ನು ತಕ್ಷಣ ಅಮಾನತು ಮಾಡಿ ಜಿಲ್ಲೆಯಿಂದ ಎತ್ತಂಗಡಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಯು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಬಾಬು ಜಗಜೀವನ್ ರಾಂ ಅವರ ಬೃಹತ್ ಪ್ರತಿಮೆ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-18-272106507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.