ಕೋಲಾರ: ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಗುರುವಾರ ಜಿಲ್ಲೆಯಾದ್ಯಂತ ಶ್ರದ್ಧಾ, ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಬೆಳಿಗ್ಗೆ 7.30ಕ್ಕೆ ನಗರದ ಹೊರವಲಯದ ಟಮಕದ ನೂರಾನಿ ಈದ್ಗಾ ಮೈದಾನದಲ್ಲಿ ಮೌಲಾನ ಮೌಲ್ವಿ ಅತೀಕ್ ಉರ್ ರೆಹಮಾನ್ ರಶಾದಿ ನೇತೃತ್ವದಲ್ಲಿ ಪ್ರಾರ್ಥನೆ ನಡೆಯಿತು. ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಮೌಲಾ ಖಾಜ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಮೌಲಾನ ಮೊಹಮ್ಮದ್ ರಜಾ ನೂರಿ ಪ್ರಾರ್ಥನೆ ನೆರವೇರಿಸಿದರು. ಬೆಂಗಳೂರು ರಸ್ತೆಯ ಶಾಹಿ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಮೌಲಾನ ಮೊಹಮ್ಮದ್ ಮುದಸೀರ್ ರಷಾದಿ ಸಾಹೇಬರು ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು.

ಅಲ್ಲಾಹುನ ನಾಮಸ್ಮರಣೆ ಮಾಡುತ್ತ ಪ್ರಾರ್ಥನೆ ನೆರವೇರಿಸಿ ಹಬ್ಬದ ಸಂದೇಶ ಸಾರಿದರು. ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬೆರೆತು ಬಾಳುವಂತೆ ಕರೆ ನೀಡಿದರು. ನಗರದ ಇತರೆ ಮಸೀದಿಗಳಲ್ಲಿಯೂ ಪ್ರಾರ್ಥನೆ ನಡೆಯಿತು. ಶಾಂತಿ ಮತ್ತು ಸುವ್ಯವಸ್ಥೆಯಿಂದ ಹಬ್ಬ ಆಚರಣೆಗೆ ಜಿಲ್ಲಾ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು.

ಬೆಂಗಳೂರು ರಸ್ತೆಯ ಶಾಹಿ ಈದ್ಗಾ ಮೈದಾನದಲ್ಲಿ ಹೆಚ್ಚು ಜನರು ಸೇರಿದ್ದರಿಂದ ಕೆಲವರು ಪಕ್ಕದಲ್ಲೇ ಇರುವ ಮೇಲ್ಸೇತುವೆ ಮೇಲೂ ಕುಳಿತು ಪ್ರಾರ್ಥನೆ ಸಲ್ಲಿಸಿದರು. ಆಗ ಸಂಚಾರ ನಿರ್ಬಂಧಿಸಲಾಗಿತ್ತು. ನಗರದ ಮೂರೂ ಈದ್ಗಾ ಮೈದಾನಗಳಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮುಂಚೆ ಬೆಳಿಗ್ಗೆ 7 ಗಂಟೆಯಿಂದಲೇ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಾಹುವಿನ ಸ್ಮರಣೆ ಮಾಡಿದರು.

ಮಹಿಳೆಯರು, ವೃದ್ಧರು ಮನೆಗಳಲ್ಲೇ ವಿಶೇಷ ಪ್ರಾರ್ಥನೆ ಮಾಡಿದರು. ಮಕ್ಕಳು, ಯುವಕರು ಹೊಸ ಉಡುಪು ಧರಿಸಿ ಸಂಭ್ರಮಿಸಿದರು. ಮನೆಗಳಲ್ಲಿ ಕೂಡ ಗೃಹಿಣಿಯರು ನಸುಕಿನಿಂದಲೇ ಆಚರಣೆಯ ತಯಾರಿಯಲ್ಲಿ ತೊಡಗಿದ್ದರು. ಈದ್ನ ವಿಶೇಷ ಖಾದ್ಯಗಳನ್ನು ತಯಾರಿಸಿದ್ದರು. ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಸಿಹಿ ಹಾಗೂ ಮಾಂಸದ ಊಟ ಸವಿದರು.

ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದ ಮಾಲೀಕತ್ವದ ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು, ಬೇಕರಿ, ಬಟ್ಟೆ ಅಂಗಡಿಗಳನ್ನು ಬಂದ್ ಮಾಡಿ ಕುಟುಂಬದೊಂದಿಗೆ ಕಾಲ ಕಳೆದರು.

ಮುಸ್ಲಿಂ ಸಮುದಾಯದವರು ಬಕ್ರೀದ್ನಲ್ಲಿ ಜಕಾತ್ (ದಾನ) ನೀಡುವುದು ವಿಶೇಷ. ಆರ್ಥಿಕವಾಗಿ ಸದೃಢರಾಗಿರುವವರು ಸಮುದಾಯದ ಬಡವರಿಗೆ ದಾನ ಮಾಡುವುದು ಸಂಪ್ರದಾಯ. ಮುಸ್ಲಿಂ ಧರ್ಮದ ಪಂಚಸೂತ್ರಗಳಲ್ಲಿ ಒಂದಾದ ಜಕಾತ್ ಪಾಲಿಸಿದರೆ ಅಲ್ಲಾಹುವಿನ ಕೃಪೆಗೆ ಪಾತ್ರರಾಗಬಹುದು ಎಂಬ ನಂಬಿಕೆ ಇದೆ. ಈ ಕಾರಣ ಈ ಹಬ್ಬದಲ್ಲಿ ಆಶಕ್ತರಿಗೆ ದಾನ ಮಾಡಲಾಗುತ್ತದೆ. ಮನೆಗಳಲ್ಲಿ ಬಕ್ರೀದ್ ವಿಶೇಷವಾಗಿ ಕುರ್ಬಾನಿ ನೀಡಲಾಗುತ್ತದೆ.

ಶಾಹಿ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖಂಡರು ಪಾಲ್ಗೊಂಡಿದ್ದರು. ಬಳಿಕ ಮುಸ್ಲಿಂ ಸಮುದಾಯದವರಿಗೆ ಶುಭಾಶಯ ಕೋರಿದರು. ರಾಜಕೀಯ ಮುಖಂಡರಾರು ಕಾಣಿಸಲಿಲ್ಲ.ಬೆಂಗಳೂರಿನಲ್ಲಿ ರಾಜಕೀಯ ವಿದ್ಯಮಾನಗಳು ಜೋರಾಗಿದ್ದ ಕಾರಣ ಶಾಸಕರು, ವಿಧಾನ ಪರಿಷತ್ ಸದಸ್ಯರು ಬಂದಿರಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-1050321040

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.