ಭಾನುವಾರ, ಮೇ 22, 2022
24 °C

ಕೋಲಾರ ಬಂದ್‌: ಮುತಾಲಿಕ್‌ಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ದತ್ತ ಮಾಲಾಧಾರಿಗಳ ಬಸ್‌ ಮೇಲಿನ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಗುರುವಾರ (ನ.18) ಕೋಲಾರ ಬಂದ್‌ಗೆ ಕರೆ ಕೊಟ್ಟಿದ್ದು, ಬಂದ್‌ನ ನೇತೃತ್ವ ವಹಿಸಲು ಬರುತ್ತಿರುವ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

‘ಬಂದ್‌ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುತಾಲಿಕ್ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬಂದ್‌ ವೇಳೆ ಯಾವುದೇ ರ‍್ಯಾಲಿ ಅಥವಾ ಪ್ರತಿಭಟನಾ ಮೆರವಣಿಗೆ ನಡೆಸುವಂತಿಲ್ಲ’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದಡಿ ಮುತಾಲಿಕ್‌ ಅವರ ವಿರುದ್ಧ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಜಿಲ್ಲಾ ಕೇಂದ್ರದಲ್ಲಿ ಈ ಹಿಂದೆ ಕೋಮುಗಲಭೆ ನಡೆದ ಉದಾಹರಣೆಗಳಿವೆ. ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಕೋಲಾರ ಜಿಲ್ಲಾ ಕೇಂದ್ರದಲ್ಲಿ 2020ರ ಜನವರಿಯಲ್ಲಿ ನಡೆದ ಜನಾಂದೋಲನದ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದಿತ್ತು. ಹೀಗಾಗಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮುತಾಲಿಕ್‌ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.