ಬಂಗಾರಪೇಟೆ: ತಾಲ್ಲೂಕಿನ ಕಾಮ ಸಮುದ್ರ ಹೋಬಳಿಯ ಬೋಡೆನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಬೋಡೆನಹಳ್ಳಿ ಗ್ರಾಮದ ಬಾಬು ಮತ್ತು ರೂಪ ದಂಪತಿಯ ಪುತ್ರಿ ತನುಶ್ರೀ (15) ಹಾಗೂ ಅದೇ ಗ್ರಾಮದ ವರದಾರಾಜು ಮತ್ತು ಶ್ಯಾಮಲಾ ದಂಪತಿಯ ಪುತ್ರ ಕಾರ್ತಿಕ್ (8) ಮೃತರು. ಮಕ್ಕಳು ಸಂಬಂಧದಲ್ಲಿ ಅಕ್ಕ–ತಮ್ಮ ಆಗಿದ್ದರು.

ತಾಲ್ಲೂಕಿನ ನಲ್ಲಗುಟ್ಟಹಳ್ಳಿಯ ಜೀವನ್ ಪ್ರಗತಿ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಕಾರ್ತಿಕ್, ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಇದನ್ನು ಕಂಡ ತನುಶ್ರೀ ಆತನನ್ನು ರಕ್ಷಿಸಲು ಹೊಂಡಕ್ಕೆ ಇಳಿದಿದ್ದಾಳೆ. ಆದರೆ, ನೀರಿನ ಆಳ ಅರಿಯದ ಕಾರಣ ಇಬ್ಬರೂ ಜಲಸಮಾಧಿಯಾಗಿದ್ದಾರೆ. ತನುಶ್ರೀ ಯಳೆಸಂದ್ರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿದ್ದು, ಇತ್ತೀಚೆಗಷ್ಟೇ ಪ್ರಕಟವಾದ ಫಲಿತಾಂಶದಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು.

ತಕ್ಷಣ ತಹಶೀಲ್ದಾರ್ ಕೆ.ಎನ್.ಸುಜಾತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಲಾ ಕೆ.ಎಂ. ಸ್ಥಳಕ್ಕೆ ಭೇಟಿ ನೀಡಿ, ಶೋಕತಪ್ತರಾದ ಪೋಷಕರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಮೌನ ಆವರಿಸಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-18-2008129892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.