ಬಂಗಾರಪೇಟೆ: ತಾಲ್ಲೂಕಿನ ವಡಿಗೇರಿ ರೈತರೊಬ್ಬರ ಜಮೀನಿನ ಹದ್ದುಬಸ್ತು ಮಾಡಿಕೊಡುವಲ್ಲಿ ಭೂಮಾಪನ ಇಲಾಖೆ ಅಧಿಕಾರಿಗಳ ವಿಳಂಬ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಲಯದ ಆದೇಶವಿದ್ದರೂ ಗಡಿ ಗುರುತಿಸಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳ ನಡೆ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಡಿಗೇರಿ ಗ್ರಾಮದ ನಂಜಪ್ಪ ಅವರು ಸುಮಾರು 14 ವರ್ಷಗಳ ಹಿಂದೆ ಮುನಿರಾಜು ಎಂಬುವವರಿಂದ ಸರ್ವೆ ನಂಬರ್ 152/2ರಲ್ಲಿ 4 ಬೆಳ್ಳಿ 35 ಗುಂಟೆ ಜಮೀನನ್ನು ಜಿಪಿಎ ಮೂಲಕ ನೋಂದಣಿ ಮಾಡಿಸಿಕೊಂಡಿದ್ದರು. ಅಂದಿನಿಂದಲೂ ಅವರೇ ಜಮೀನಿನ ಸ್ವಾಧೀನದಲ್ಲಿದ್ದು, ಬೆಳೆ ಬೆಳೆಯುತ್ತಿದ್ದಾರೆ. ಆದರೆ, ಮೂಲ ಕುಟುಂಬದವರು ಈ ಜಮೀನು ತಮಗೆ ಸೇರಿದ್ದೆಂದು ತಹಶೀಲ್ದಾರ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಸುದೀರ್ಘ ಕಾನೂನು ಹೋರಾಟದ ಬಳಿಕ ಉಪ ವಿಭಾಗಾಧಿಕಾರಿ ನ್ಯಾಯಾಲಯವು ಜಮೀನಿನ ದಾಖಲೆಗಳನ್ನು ಪರಿಶೀಲಿಸಿ ಸದರಿ ಜಮೀನು ನಂಜಪ್ಪ ಅವರಿಗೆ ಸೇರಿದ್ದೆಂದು ಅಂತಿಮ ಆದೇಶ ಹೊರಡಿಸಿದೆ. ಪ್ರಸ್ತುತ ನಂಜಪ್ಪ ಅವರ ಹೆಸರಿನಲ್ಲಿ 11ಇ ಸ್ಕೆಚ್, ಪಹಣಿ, ಪಟ್ಟಾ ಸೇರಿದಂತೆ ಎಲ್ಲ ಅಧಿಕೃತ ದಾಖಲೆಗಳಿವೆ.

ನ್ಯಾಯಾಲಯದ ಆದೇಶ ಮತ್ತು ದಾಖಲೆಗಳಿದ್ದರೂ ಭೂಮಾಪನ ಇಲಾಖೆ ಅಧಿಕಾರಿಗಳು ಜಮೀನಿನ ಹದ್ದುಬಸ್ತು ಮಾಡಿಕೊಡಲು ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ಪದೇ ಪದೇ ದಿನಾಂಕಗಳನ್ನು ಮುಂದೂಡುತ್ತಿರುವುದು ಶಂಕೆಗೆ ಎಡೆಮಾಡಿಕೊಟ್ಟಿದೆ ಎಂದು ಸಂತ್ರಸ್ತರು ದೂರಿದ್ದಾರೆ.

‘ಒಂದು ಕಡೆ ದೌರ್ಜನ್ಯ. ಇನ್ನೊಂದು ಕಡೆ ಅಧಿಕಾರಿಗಳ ಅಸಡ್ಡೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ನನಗೆ ನ್ಯಾಯ ಸಿಗದಿದ್ದರೆ ದಯಾಮರಣ ಕೊಡಿ’ ಎಂದು ನಂಜಪ್ಪ ಅಳಲು ತೋಡಿಕೊಂಡಿದ್ದಾರೆ.

ರಿಪಬ್ಲಿಕನ್ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಚಿಕ್ಕನಾರಾಯಣ ಮಾತನಾಡಿ, ‘ಅಧಿಕಾರಿಗಳ ಈ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ಗಲಭೆಯಾಗುವ ಸಾಧ್ಯತೆಯಿದೆ. ಕೂಡಲೇ ಎಡಿಎಲ್ಆರ್ ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಹದ್ದುಬಸ್ತು ಮಾಡಿಕೊಡಬೇಕು. ತಪ್ಪಿದಲ್ಲಿ ತಾಲ್ಲೂಕು ಆಡಳಿತ ಕಚೇರಿಯ ಮುಂದೆ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಜಿಲ್ಲಾಧ್ಯಕ್ಷ ಅಮರೇಶ್, ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ, ತಾಲ್ಲೂಕು ಮುಖಂಡ ತಿಪ್ಪರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-18-1374141336

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.