ಬಂಗಾರಪೇಟೆ: ಪಟ್ಟಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಧೆ ಮೇಲೆ ಬಂಗಾರಪೇಟೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಒಡಿಸ್ಸಾ ಮೂಲದ ಸಿಮನ್ ಸಬರ್ (29) ಬಂಧಿತ ಆರೋಪಿ. ಆತನಿಂದ ಅಂದಾಜು ₹1.75 ಲಕ್ಷ ವೆಚ್ಚದ 3 ಕೆಜಿ ಗಾಂಜಾ, ಒಂದು ಬ್ಯಾಗ್, ಮೊಬೈಲ್ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ತಂಡವು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಡಿವೈಎಸ್ಪಿ ವಿ.ಲಕ್ಷ್ಮಯ್ಯ ಮತ್ತು ಇನ್ಸ್ಪೆಕ್ಟರ್ ರವಿಕುಮಾರ್.ಸಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐ ರಾಜಣ್ಣ ಹಾಗೂ ಸಿಬ್ಬಂದಿಗಳಾದ ವೇಣುಗೋಪಾಲ್, ಅನಿಲ್, ಸುನಿಲ್, ಮುನಿರಾಜು, ಮಹೇಂದ್ರ ಕುಮಾರ್ ಮತ್ತು ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-18-686437753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.