ಬಂಗಾರಪೇಟೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್ಇಐಎಸ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಗಾರಪೇಟೆ ತಾಲ್ಲೂಕಿನ ವಿವಿಧ ವಸತಿ ಶಾಲೆಗಳಲ್ಲಿರುವ ಖಾಲಿ ಇರುವ ಅತಿಥಿ ಶಿಕ್ಷಕರ ಹಾಗೂ ಸಿಬ್ಬಂದಿ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನ ಯಳೇಸಂದ್ರ ಹಾಗೂ ಡಿ.ಪಿ.ಹಳ್ಳಿ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.

ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಎಫ್ಡಿಎ (ಕಂಪ್ಯೂಟರ್ ಇನ್ಸ್ಟ್ರಕ್ಟರ್) ಹುದ್ದೆಗಳು ಖಾಲಿ ಇವೆ. ಅರ್ಹರು ಅಗತ್ಯ ದಾಖಲಾತಿಯೊಂದಿಗೆ ಜೂನ್ 5ರೊಳಗೆ ಆಯಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯಳೇಸಂದ್ರ 70903 87590, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಯಳೇಸಂದ್ರ 97405 13232, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಿ.ಪಿ.ಹಳ್ಳಿ 99804 04768 ಸಂಪರ್ಕಿಸಬಹುದು ಎಂದು ವಸತಿ ಶಾಲೆಗಳ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-18-1154885736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.