ಬಂಗಾರಪೇಟೆ: ತಾಲ್ಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾದ ಕಾಮಸಮುದ್ರ ರೈಲ್ವೆ ಗೇಟ್ನಲ್ಲಿ ಶುಕ್ರವಾರ ಉಂಟಾದ ತಾಂತ್ರಿಕ ದೋಷ ಸಾರ್ವಜನಿಕರನ್ನು ಹೈರಾಣಾಗಿಸಿತು.

ಸುಮಾರು ಒಂದು ಗಂಟೆಗೂ ಅಧಿಕ ಕಾಲ ರೈಲ್ವೆ ಗೇಟ್ ತೆರೆಯದ ಪರಿಣಾಮ ಕಿಲೋ ಮೀಟರ್ ಗಟ್ಟಲೆ ವಾಹನಗಳ ಸಾಲು ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಯಿತು.

ತಾಲ್ಲೂಕಿನ ಕಾಮಸಮುದ್ರ ರೈಲ್ವೆ ಗೇಟ್ ಮೂಲಕ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಶುಕ್ರವಾರ ಮಧ್ಯಾಹ್ನ ರೈಲು ಹಾದುಹೋದ ಬಳಿಕ ಗೇಟ್ ತೆರೆಯಲು ಪ್ರಯತ್ನಿಸಿದಾಗ ತಾಂತ್ರಿಕ ದೋಷದಿಂದ ಗೇಟ್ ಲಾಕ್ ಆಗಿದೆ. ಇದರಿಂದ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಗೇಟ್ನ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ, ಕಾರು, ಆಟೊ, ಲಾರಿ, ಬಸ್ಗಳು ಸಾಲುಗಟ್ಟಿ ನಿಂತಿದ್ದವು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ಒಂದೇ ಕಡೆ ನಿಂತಿದ್ದು, ಪ್ರಯಾಣಿಕರು ಹೈರಾಣಾದರು.

ಪರ್ಯಾಯ ರಸ್ತೆ ಇಲ್ಲದೆ ವ್ಯಾಪಾರಿಗಳು, ವಿದ್ಯಾರ್ಥಿಗಳು, ಆಂಬುಲೈನ್ಸ್ ಮುಂತಾದವು ವಾಹನ ದಟ್ಟಣೆಯಲ್ಲಿ ಸಿಲುಕಿ ಪರದಾಡುವಂತಾಯಿತು.

ಪದೇ ಪದೇ ಇಂತಹ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದರೂ ರೈಲ್ವೆ ಇಲಾಖೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತಿಲ್ಲ. ಹಾಗಾಗಿ ಇಲಾಖೆ ಕೂಡಲೇ ಸಮಸ್ಯೆ ಸರಿಪಡಿಸಬೇಕೆಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-18-838595154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.