ಬಂಗಾರಪೇಟೆ: ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ 232 ಅರ್ಜಿಗಳು ಸ್ವೀಕಾರಗೊಂಡವು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಸರ್ಕಾರ ನೀಡುವ ಪಿಂಚಣಿ ಸೌಲಭ್ಯ ಪಡೆಯಲು ಸಾರ್ವಜನಿಕರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ ಎಂದು ಸೂಚನೆ ನೀಡಿದ್ದಾರೆ.

‘ಪಿಂಚಣಿ ಸಂಬಂಧಿತ ಯಾವುದೇ ಕೆಲಸಗಳಿದ್ದರೂ ಸಾರ್ವಜನಿಕರು ಮಧ್ಯವರ್ತಿಗಳ ಮೊರೆ ಹೋಗಬಾರದು. ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಥವಾ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಿ. ಕೆಲಸ ಮಾಡಿಕೊಡುವುದಾಗಿ ನಂಬಿಸಿ ಅಮಾಯಕರಿಂದ ಹಣ ವಸೂಲಿ ಮಾಡುವ ದಲ್ಲಾಳಿಗಳ ಬಗ್ಗೆ ಎಚ್ಚರವಿರಲಿ. ಅಂತಹ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ನನ್ನ ಗಮನಕ್ಕೆ ತನ್ನಿ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಸಾರ್ವಜನಿಕರು ಕಚೇರಿಗೆ ಬಂದಾಗ ಅವರನ್ನು ಅಲೆದಾಡಿಸದೆ, ನಿಯಮಾನುಸಾರ ಇರುವ ದಾಖಲೆಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಶೀಘ್ರ ಸೌಲಭ್ಯ ತಲುಪಿಸಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು’.

‘ಪಿಂಚಣಿ ಪಡೆಯಲು ಸಾರ್ವಜನಿಕರು ಯಾರಿಗೂ ಆಮಿಷ ಒಡ್ಡುವ ಅಥವಾ ಲಂಚ ನೀಡುವ ಅವಶ್ಯಕತೆಯಿಲ್ಲ. ನಿಮ್ಮ ಅರ್ಹತೆಯೇ ನಿಮಗೆ ಸೌಲಭ್ಯ ತಂದುಕೊಡುತ್ತದೆ. ಆಡಳಿತವನ್ನು ನಿಮ್ಮ ಮನೆಬಾಗಿಲಿಗೆ ತರುವುದೇ ನಮ್ಮ ಉದ್ದೇಶ’ ಎಂದು ಭರವಸೆ ನೀಡಿದರು.

ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಮತ್ತು ಮನಸ್ವಿನಿ ಅಂತಹ ವಿವಿಧ ಯೋಜನೆಗಳು ಚಾಲ್ತಿಯಲ್ಲಿದ್ದು, ಇವುಗಳ ಲಾಭವನ್ನು ಅರ್ಹರು ಯಾವುದೇ ಅಡೆತಡೆಯಿಲ್ಲದೆ ಪಡೆಯಲು ಇಂತಹ ಅದಾಲತ್ಗಳು ಸಹಕಾರಿ ಎಂದು ತಿಳಿಸಿದರು.

ಆದಾಲತ್ನಲ್ಲಿ 232 ಅರ್ಜಿಗಳು ಸ್ವೀಕಾರವಾದವು. ಅವುಗಳಲ್ಲಿ ಸ್ಥಳದಲ್ಲೇ ವಿಲೇವಾರಿ ಮಾಡಲಾಯಿತು.

ಶಿರಸ್ತೇದಾರ್ ಹುಚ್ಚರಾಯಪ್ಪ, ಪ್ರಭಾಕರನ್, ಕಂದಾಯ ರಾಜಸ್ವ ನಿರೀಕ್ಷಕ ಅಜಯ್, ಗ್ರಾಮ ಆಡಳಿತಾಧಿಕಾರಿಗಳಾದ ಮಧುಚಂದ್ರ, ಚೇತನ್, ಅಮರೇಶ್, ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-1646335691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.